ಬೆಂಗಳೂರು: ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯಲ್ಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅಹ್ವಾನಿಸಲಾಗಿದೆ.
ಇದನ್ನೂ ಓದಿ: ಕಾರ್ಪೇಂಟರ್ ಅಡ್ಡಗಟ್ಟಿ ಕತ್ತು ಕೊಯ್ದು ಬರ್ಬರ ಹತ್ಯೆ
ಹುದ್ದೆಗಳ ವಿವರ; ಜಿಲ್ಲಾ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್ ಕೋ-ಆರ್ಡಿನೇಟರ್ ಹುದ್ದೆ 1, ಫೀಜಿಷಿಯನ್-2, ಸ್ಟಾಫ್ ನರ್ಸ್-8 ಇದ್ದು, ಹುದ್ದೆಗಳಿಗನುಗುಣವಾಗಿ ಅನುಭವ ಹೊಂದಿರಬೇಕು.ಈ ಹುದ್ದೆಯು ಒಂದು ವರ್ಷ ಅವಧಿಗೆ ಅಥವಾ ಈ ಕಚೇರಿಯ ಮುಂದಿನ ಆದೇಶದವರಿಗೆ ಸೀಮಿತವಿರುತ್ತವೆ. ಹಾಗೂ ಸದರಿ ಹುದ್ದೆಯು ಯಾವುದೇ ಕಾರಣಕ್ಕೂ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸಲಾಗುವುದಿಲ್ಲ ಮತ್ತು ಅಭ್ಯರ್ಥಿಗಳ ಆಯ್ಕೆಯು ಮೀಸಲಾತಿ ಹಾಗೂ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಇದನ್ನೂ ಓದಿ: ಬಾಡೂಟದ ಬಳಿಕ ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಹುದ್ದೆಯ ಕುರಿತು ತಮ್ಮ ಬಯೋಡಾಟಾದಲ್ಲಿ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಅಗತ್ಯ ವಿದ್ಯಾರ್ಹತೆ, ಅನುಭವ, ಜಾತಿ ಪ್ರಮಾಣ ಪತ್ರ, ಮತ್ತು ಇತರೆ ದೃಢಿಕೃತÀ ನಕಲು ದಾಖಲಾತಿಗಳ ಪ್ರತಿಗಳ ಒಂದು ಸೆಟ್ ಹಾಗೂ ತಾವು ಸಲ್ಲಿಸುವ ದಾಖಲಾತಿಗಳ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
ನೇರ ಸಂದರ್ಶನವು ಮಾರ್ಚ್ 3 ರಂದು ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೇಲ್ dsubellary@gmail.com ಅಥವಾ ದೂ.08392- 274031ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.