ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ; ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ (LADC) ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.

Written by - Manjunath N | Last Updated : Nov 22, 2023, 10:36 PM IST
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ; ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬಳ್ಳಾರಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ (LADC) ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.

ಕಚೇರಿ ಆಡಳಿತ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹಾಗೂ ಜವಾನ ಹುದ್ದೆಗಳಿಗೆ ತಲಾ ಒಂದರಂತೆ ಹುದ್ದೆಗಳಿವೆ. ಮಾಹೆಯಾನ, ಕಚೇರಿ ಆಡಳಿತ ಸಹಾಯಕರಿಗೆ ರೂ.19,000, ಡೆಟಾ ಎಂಟ್ರಿ ಅಪರೇಟರ್ ಅವರಿಗೆ ರೂ,17,271 ಹಾಗೂ ಜವಾನ ಹುದ್ದೆಗೆ ರೂ.15202 ಸಂಚಿತ ಸಂಭಾವನೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಕಚೇರಿ ಆಡಳಿತ ಸಹಾಯಕ (ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್) ಹುದ್ದೆಗೆ ವಿದ್ಯಾರ್ಹತೆ:

ಯಾವುದೇ ಪದವಿ, ಮೂಲ ಪದ ಸಂಸ್ಕರಣಾ ಕೌಶಲ್ಯಗಳು ಮತ್ತು ಕಂಪ್ಯೂಟರನ್ನು ನಿರ್ವಹಿಸುವ ಸಾಮಥ್ರ್ಯ ಮತ್ತು ಉತ್ತಮ ಟೈಪಿಂಗ್ ವೇಗ, ಫೈಲ್‍ಗಳನ್ನು ಸಿದ್ಧಪಡಿಸುವ ಸಾಮಥ್ರ್ಯ, ಫೈಲ್ ನಿರ್ವಹಣೆ ಮತ್ತು ಪ್ರಕ್ರಿಯೆ ಜ್ಞಾನ ಹೊಂದಿರಬೇಕು.

ರಿಸೆಪ್ಷನಿಸ್ಟ್/ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ವಿದ್ಯಾರ್ಹತೆ:

ಯಾವುದೇ ಪದವಿ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಪದ ಮತ್ತು ಡೇಟಾ ಸಂಸ್ಕರಣಾ ಸಾಮಥ್ರ್ಯ, ಟೆಲಿ ಸಂವಹನ ವ್ಯವಸ್ಥೆಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ (ದೂರವಾಣಿ, ಫ್ಯಾಕ್ಸ್‍ಯಂತ್ರ, ಸ್ವಿಚ್‍ಬೋರ್ಡ್ ಇತ್ಯಾದಿ), ಉತ್ತಮ ಟೈಪಿಂಗ್ ವೇಗದೊಂದಿಗೆ ಪ್ರಾವೀಣ್ಯತೆ ಹೊಂದಿರಬೇಕು.

ಜವಾನ ಹುದ್ದೆಗೆ ವಿದ್ಯಾರ್ಹತೆಯು ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು.

ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸಪೋರ್ಟ್ ಸೈಜ್ ಫೋಟೋ ಗಳನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಡಿ.04 ಕೊನೆಯ ದಿನವಾಗಿರುತ್ತದೆ.

ಮೇಲ್ಕಂಡ ಹುದ್ದೆಗಳ ನೇಮಕಾತಿಯು ತಾತ್ಕಾಲಿಕವಾಗಿದ್ದು, ಪ್ರಾಧಿಕಾರವು ನೇಮಕಾತಿಯನ್ನು ಯಾವುದೇ ನೋಟಿಸ್ ನೀಡದೇ ರದ್ದುಗೊಳಿಸುವ ಅಧಿಕಾರ ಹೊಂದಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಹಾಗೂ ದೂ.08392-278077ಗೆ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

 

Trending News