ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮತಿಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ-ನೀಟ್ ಪರೀಕ್ಷೆ ಬರೆದು ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ ಪದವಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಬಹುದು.
ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್ http//kmdconline.karnataka.gov.in ಮೂಲಕ ಜುಲೈ 20 ರೊಳಗೆ ಅರ್ಜಿ ಸಲ್ಲಿಸಿ ಜಿಲ್ಲಾ ಕಛೇರಿಗೆ ಜುಲೈ 25ರೊಳಗೆ ಭೌತಿಕ ಪ್ರತಿ ಸಲ್ಲಿಬೇಕು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ಅಂತರ್ಜಾಲ ಮತ್ತು ಜಿಲ್ಲಾ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.