ಹಾಸನ: ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 12 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಶೇ 10 ರಷ್ಟು ಹುಂಡಿ ಹಣವನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 22ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: ಪ್ರವರ್ಗ-2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ವೇತನ: ಮಾಸಿಕ ₹15,196.72


ಉದ್ಯೋಗದ ಸ್ಥಳ: ಹಾಸನ


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಶುಲ್ಕ: PWD ಅಭ್ಯರ್ಥಿಗಳಿಗೆ ₹100, SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹200, ಪ್ರವರ್ಗ-2A/2B/3A/3B ಅಭ್ಯರ್ಥಿಗಳಿಗೆ ₹300 ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ₹500


ಪಾವತಿ ವಿಧಾನ: ಈ ಲಿಂಕ್‌ ಕ್ಲಿಕ್‌ ಮಾಡಿ https://sevasindhuservices.karnataka.gov.in/error.do ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ದೇವಸ್ತಾನಗಳಿಗೆ ಸರ್ಕಾರ 300 ಕೋಟಿ ರೂ ಕೊಡಬೇಕು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.