"ವರ್ಗಾವಣೆ ತಡೆಗಟ್ಟಲು ಏಕಕಾಲದಲ್ಲಿ 2000 ಲೈನ್‍ಮೆನ್‍ಗಳ ನೇಮಕ"

ರಾಜ್ಯದಲ್ಲಿ 2000 ಲೈನ್‍ಮೆನ್‍ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್‍ಮೆನ್‍ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ.ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. 

Written by - Manjunath N | Last Updated : Jul 12, 2024, 12:52 AM IST
  • ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ.
  • ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ.
  • ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ
 "ವರ್ಗಾವಣೆ ತಡೆಗಟ್ಟಲು ಏಕಕಾಲದಲ್ಲಿ 2000 ಲೈನ್‍ಮೆನ್‍ಗಳ ನೇಮಕ" title=

ಬೆಂಗಳೂರು: ರಾಜ್ಯದಲ್ಲಿ 2000 ಲೈನ್‍ಮೆನ್‍ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್‍ಮೆನ್‍ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್‍ಮೆನ್‍ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್‍ಮೆನ್‍ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಕೆಜೆ ಜಾರ್ಜ್ ತಿಳಿಸಿದ್ದಾರೆ.

ಇದನ್ನೂ ಓದಿ- ಕಥುವಾದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರ ದಾಳಿ, ಹೊಣೆಹೊತ್ತ ಕಾಶ್ಮೀರ್ ಟೈಗರ್ಸ್

'ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್‍ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ- Hathras tragedy: ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಹೃದಯಾಘಾತ!

ಸಭೆಯಲ್ಲಿ ಶಾಸಕರಾದ ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News