ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ "ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. 


COMMERCIAL BREAK
SCROLL TO CONTINUE READING

ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಬೆಂಬಲ ನೀಡಲಿ: ಡಿ ಕೆ ಶಿವಕುಮಾರ್


ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ʼಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಆಸಕ್ತರು ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.


ಇದನ್ನೂ ಓದಿ: ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.