ಬೆಂಗಳೂರು: ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ  ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸ್ವಯಂ ಉದ್ಯೋಗ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.50,000 ಗಳವರೆಗೆ ಆರ್ಥಿಕ ನೆರವು ನೀಡಲಾಗುವುದು.ಶೇ.20ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ : ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ


ಆಸಕ್ತರು https://suvidha.karnataka.gov.in ಜಾಲತಾಣದಲ್ಲಿ ಅಗಸ್ಟ್ 24 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ