ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜನವರಿ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ತಿಳಿಸಿದ್ದಾರೆ.

Written by - Manjunath Naragund | Last Updated : Jan 13, 2024, 03:48 PM IST
  • ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು.
  • ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.
  • ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ.
ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ title=

ಬಳ್ಳಾರಿ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜನವರಿ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!

ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆಯ ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.7483538942, 9449226221 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News