ಕಲಬುರಗಿ: ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಇದೇ ಜುಲೈ 11 ರಿಂದ 23 ರವರೆಗೆ ಉಚಿತವಾಗಿ 13 ದಿನಗಳ ಕಾಲ ಸಿಸಿಟಿವಿ ಕ್ಯಾಮರಾ, ಸೆಕ್ಯೂರಿಟಿ ಅಲಾರ್ಮ್, ಸ್ಮೋಕ್ ಡಿಟೆಕ್ಟರ್ ಅಳವಡಿಕೆ ಮತ್ತು ಸೇವೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗೊಂಬೆಯಂತಿದ್ದ ನಟಿ ಪಾಲಿಗೆ ವಿಲನ್ ಆದ ವೈದ್ಯರು! ದಂತ ಚಿಕಿತ್ಸೆ ಪಡೆದ ಯುವನಟಿಗೆ ಇಂದೆಂಥ ಸ್ಥಿತಿ?


ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2022ರ  ಜುಲೈ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ: Naga Chaitanya: ವಿಚ್ಛೇದನದ ಬಳಿಕ ಈ ನಟಿಯ ಜತೆ ನಾಗ ಚೈತನ್ಯ ಡೇಟಿಂಗ್!?


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2022ರ ಜುಲೈ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.