ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 264 ʼಭೂಮಾಪಕರುʼ -ಸಮೂಹ ʼಸಿʼ ಹುದ್ದೆಗಳ ಭರ್ತಿಗೆ KPSCಯಿಂದ ಅಧಿಸೂಚನೆ ಹೊರಡಿಸಲಾಗಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 264 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.


ಇದನ್ನೂ ಓದಿ: Infosys : ಮಾರ್ಚ್ 9 ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ಇಂಟರ್‌ವ್ಯೂವ್


ಪ್ರಮುಖ ದಿನಾಂಕಗಳು


ಭೂಮಾಪಕರ 264 ಹುದ್ದೆಗಳಿಗೆ 11-03-2024ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ತಾತ್ಪೂರ್ವಿಕ(Tentative) ಸ್ಪರ್ಧಾತ್ಮಕ ಪರೀಕ್ಷೆಯ ಕನ್ನಡ ಭಾಷಾ ಪರೀಕ್ಷೆಯು 20-07-2024ರಂದು ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯು 21-07-2024ರಂದು ನಡೆಸಲು ನಿರ್ಧರಿಸಲಾಗದೆ.  


ಶೈಕ್ಷಣಿಕ ವಿದ್ಯಾರ್ಹತೆ


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಪಿಯುಸಿ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ(CBSE or ICSE) ಇವುಗಳಲ್ಲಿ ವಿಜ್ಞಾನ ವಿಷಯದಲ್ಲಿ ಪಡೆದು ಗಣಿತ ವಿಷಯದಲ್ಲಿ ಶೇ.60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡರ್ ಅಂಡ್ ಸಿಟಿ ಸರ್ವೆಯ ಪದವಿಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್‌ ಸರ್ವೆ ಟ್ರೇಡ್‌ನಲ್ಲಿ ಉತ್ತೀರ್ಣರಾಗಿರಬೇಕು. 


ವೇತನ ಶ್ರೇಣಿ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ೨೩,೫೦೦ ರೂ.ನಿಂದ ೪೭,೬೫೦ ರೂ. ವೇತನ ನೀಡಲಾಗುತ್ತದೆ. 


ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಾಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ-2A, 2B, 3A, 3B ವರ್ಗದವರಿಗೆ 38 ವರ್ಷಗಳು. SC/ST ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.


ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ 600 ರೂ., ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ., ಮತ್ತು SC/ST, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 


ಇದನ್ನೂ ಓದಿ:  ಜೂನ್ ತಿಂಗಳ ಅವಧಿಯಲ್ಲಿ ಒಟ್ಟು 15 ಮಂದಿ ವಿಧಾನಪರಿಷತ್ ಸದಸ್ಯರ ಅವಧಿ ಮುಕ್ತಾಯ


ಅರ್ಜಿ ಸಲ್ಲಿಕೆ ಹೇಗೆ: ಅಭ್ಯರ್ಥಿಗಳು https://kpsc.kar.nic.in/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.