ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ
Karnataka Teachers Recruitment 2024: ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ.
Karnataka Teachers Recruitment 2024: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.
ಇದನ್ನೂ ಓದಿ: ಬೆಳೆ ವಿಮೆ ಮಂಜೂರಾತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ.
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5,000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ.
ಇದನ್ನೂ ಓದಿ: ಹತ್ರಾಸ್ ಅಪಘಾತ ಸ್ಥಳ ಪರಿಶೀಲಿಸಿದ ವಿಧಿ ವಿಜ್ಞಾನ ತಂಡ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.