ಸರ್ಕಾರಿ ನೌಕರಿ ಪಡೆಯಲು ಉತ್ತಮ ಅವಕಾಶ: ಪ್ರತಿದಿನ 2100ಕ್ಕೂ ಹೆಚ್ಚು ಜನರಿಗೆ ಉದ್ಯೋಗ!

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ.   

Written by - Puttaraj K Alur | Last Updated : Jun 14, 2022, 05:40 PM IST
  • ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಸುದ್ದಿ ನೀಡಿದ್ದಾರೆ
  • ಮುಂದಿನ 1.5 ವರ್ಷದಲ್ಲಿ ಕೇಂದ್ರ ಸರ್ಕಾರ 10 ಲಕ್ಷ ಹುದ್ದೆ ಭರ್ತಿ ಮಾಡಲಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ
  • ‘ಮಿಷನ್ ಮೋಡ್’ನಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೇಂದ್ರದ ಕ್ರಮ
ಸರ್ಕಾರಿ ನೌಕರಿ ಪಡೆಯಲು ಉತ್ತಮ ಅವಕಾಶ: ಪ್ರತಿದಿನ 2100ಕ್ಕೂ ಹೆಚ್ಚು ಜನರಿಗೆ ಉದ್ಯೋಗ! title=
ಕೇಂದ್ರ ಸರ್ಕಾರದಿಂದ 10 ಲಕ್ಷ ಹುದ್ದೆಗಳ ಭರ್ತಿ

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳನ್ನು ಕೇಂದ್ರ ಸರ್ಕಾರ ಭರ್ತಿ ಮಾಡಲಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ.  

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ‘ಮಿಷನ್ ಮೋಡ್’ನಲ್ಲಿ ನೇಮಕ ಮಾಡಿಕೊಳ್ಳುವಂತೆ ಪ್ರಧಾನಿ ಮೋದಿಯವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸೂಚಿಸಿದ್ದಾರೆ. ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಪ್ರಧಾನಿ ಮೋದಿ ಈ ನಿರ್ದೇಶನ ನೀಡಿದ್ದಾರೆಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.

ಇದನ್ನೂ ಓದಿ: ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೇಮಕಾತಿ ಮಾಡಲು ಪ್ರಧಾನಿ ಸೂಚನೆ

ದೇಶದಲ್ಲಿನ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಮಾನವ ಸಂಪನ್ಮೂಲಗಳ ಕೊರತೆಯನ್ನು ಪರಿಶೀಲಿಸಿದ್ದಾರೆ. ಮುಂದಿನ 1.5 ವರ್ಷಗಳಲ್ಲಿ ಸರ್ಕಾರವು 10 ಲಕ್ಷ ಜನರನ್ನು ‘ಮಿಷನ್ ಮೋಡ್’ನಲ್ಲಿ ನೇಮಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ’ ಎಂದು ಪಿಎಂಒ ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಏರುತ್ತಿದೆ ಕೊರೊನಾ: ಕಳೆದ 24ಗಂಟೆಯಲ್ಲಿ ಏರಿಕೆಯಾಯ್ತು ಮಹಾಮಾರಿ ಪ್ರಕರಣ!

ಏಪ್ರಿಲ್ 2ರಂದು ಕಾರ್ಯದರ್ಶಿಗಳೊಂದಿಗಿನ ಸಭೆಯಲ್ಲಿ, ಪ್ರಧಾನಿ ಮೋದಿಯವರು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಎಲ್ಲಾ ಸರ್ಕಾರಿ ಮಧ್ಯಸ್ಥಿಕೆಗಳಲ್ಲಿ ಉದ್ಯೋಗವನ್ನು ಕೇಂದ್ರೀಕರಿಸಬೇಕು ಎಂದು ಒತ್ತಾಯಿಸಿದ್ದರು. ಸಭೆಯ ನಂತರ ಕ್ಯಾಬಿನೆಟ್ ಕಾರ್ಯದರ್ಶಿಗಳಿಗೆ ಪತ್ರ ಬರೆದು ನೇಮಕಾತಿಗೆ ಸಂಬಂಧಿಸಿದ ಸಲಹೆಗಳ ಬಗ್ಗೆ ತಕ್ಷಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಪ್ರಧಾನಿ ಮೋದಿ ಘೋಷಿಸಿದಂತೆ ಮುಂದಿನ ಒಂದೂವರ್ಷದಲ್ಲಿ 10 ಲಕ್ಷ ಜನರನ್ನು ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು. ಈ ಪ್ರಕಾರ ಲೆಕ್ಕಾಚಾರ ಮಾಡಿದರೆ ಪ್ರತಿದಿನ ಸುಮಾರು 2100 ಹುದ್ದೆಗಳ ನೇಮಕಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News