ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ ಹೊಂದಿ 63 ವರ್ಷ ಮೀರದ ನಿವೃತ್ತ ಚಾಲಕರನ್ನು ಚಾಲಕ ಹುದ್ದೆಗೆ ಹಾಗೂ 65 ವರ್ಷ ಮೀರದ ನಿವೃತ್ತ ನಿರ್ವಾಹಕ/ ಸಂಚಾರ ನಿಯಂತ್ರಕರನ್ನು ನಿರ್ವಾಹಕ ಹುದ್ದೆಗೆ ತಾತ್ಕಾಲಿಕವಾಗಿ ನಿಯೋಜಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಧಿಕಾ ಪಂಡಿತ್ ಗೆ ಜನ್ಮದಿನದ ಸಂಭ್ರಮ: ಮುಂದಿನ ಸಿನಿಮಾ ಯಾವುದು..?


ಆಸಕ್ತಿಯುಳ್ಳ ನಿವೃತ್ತ ಚಾಲಕರು, ನಿರ್ವಾಹಕರು ಮತ್ತು ಸಂಚಾರ ನಿಯಂತ್ರಕರು ಸೂಕ್ತ ದಾಖಲೆಗಳೊಂದಿಗೆ ಕೂಡಲೇ ತಾವು ಇಚ್ಚಿಸುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯಾವುದೇ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಹಾಜರಾಗಬೇಕು.


ಇದನ್ನೂ ಓದಿ: Viral Video: ರಣವೀರ್ ಸಿಂಗ್ ಕಾಲು ಹಿಡಿದ ರಾಖಿ ಸಾವಂತ್ ಮಾಡಿದ್ದೇನು..?


ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಯನ್ನು ಅಥವಾ ನಿಗಮದ kkrtc.karnataka.gov.in  ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.