Govt Jobs: ರೈಲ್ವೇ ನೇಮಕಾತಿ ಮಂಡಳಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಆರಂಭ
Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ. ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.
Sarkari Naukri: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಬಾರಿಯ ಒಂದೇ ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಮಾರ್ಚ್ 8, 2024ರಂದು ರೈಲ್ವೆ ನೇಮಕಾತಿ ಮಂಡಳಿಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಅರ್ಜಿ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗಾಗಿ ಮಾರ್ಚ್ 09ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08ನೇ ಏಪ್ರಿಲ್ 2024ರವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
2024 ರ ಆರ್‌ಆರ್‌ಬಿ ತಂತ್ರಜ್ಞರ ಅರ್ಜಿ ನಮೂನೆಯು ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಗಳ (RRBs) ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ 9, 2024 ರಿಂದ ಏಪ್ರಿಲ್ 8, 2024 ರವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿದೆ. ಲಿಂಕ್ rrbapply.gov.in ಆಗಿದೆ.
ಇದನ್ನೂ ಓದಿ- ಒಂದಲ್ಲ ಎರಡಲ್ಲಾ ಏಕಕಾಲಕ್ಕೆ 5 ಸರ್ಕಾರಿ ಉದ್ಯೋಗದ ಪರೀಕ್ಷೆಗಳಲ್ಲಿ ಉತ್ತೀರ್ಣಳಾದ ಯುವತಿ!
9 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ:
ಈ ನೇಮಕಾತಿಯಡಿಯಲ್ಲಿ ಒಟ್ಟು 9144 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಪೈಕಿ 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಹಾಗೂ 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಪೋಸ್ಟ್‌ಗಳನ್ನು ಒಳಗೊಂಡಿದೆ.
ವಿದ್ಯಾರ್ಹತೆ:
ಗ್ರೇಡ್ I ಸಿಗ್ನಲ್ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಸೈನ್ಸ್ ಅಥವಾ ಬಿ.ಎಸ್ಸಿ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಭೌತಶಾಸ್ತ್ರ/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಉಪಕರಣಗಳಲ್ಲಿ ಪದವಿ ಹೊಂದಿರಬೇಕು.
ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯು ಮೆಟ್ರಿಕ್ಯುಲೇಷನ್/ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ಮತ್ತು ವಿಜ್ಞಾನದಲ್ಲಿ ಬ್ಯಾಚುಲರ್ ಡಿಗ್ರಿ ಹೊಂದಿರಬೇಕು .
ಇದನ್ನೂ ಓದಿ- 10ನೇ ತರಗತಿ ಪಾಸ್ ಆದ ಬಳಿಕ ನೌಕಾಪಡೆಯಲ್ಲಿ ಉದ್ಯೋಗ ಪಡೆಯುವ ಸಂಪೂರ್ಣ ಪ್ರಕ್ರಿಯೆ
ವಯೋಮಿತಿ:
ಟೆಕ್ನಿಷಿಯನ್ ಗ್ರೇಡ್-1 ಹುದ್ದೆಗಳಿಗೆ ವಯೋಮಿತಿ 18 ವರ್ಷಕ್ಕಿಂತ ಹೆಚ್ಚಿರಬೇಕು ಮತ್ತು 36 ವರ್ಷಗಳಿಗಿಂತ ಕಡಿಮೆ ಇರಬೇಕು. ಆದರೆ ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷಗಳ ವಯೋಮಿತಿಯನ್ನು ನಿಗದಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.