Hindustan Aeronautics Limited Recruitment 2024: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್‌ನಲ್ಲಿ ​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಸ್ಪೀಚ್​ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​​​​ಲೈನ್ ಮೂಲಕ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MASLP, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಉದ್ಯೋಗದ ಸ್ಥಳ: ಬೆಂಗಳೂರು


ಇದನ್ನೂ ಓದಿ: ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಪೂರ್ಣ : ಈ ದಿನ ಹೊರಬೀಳಲಿದೆ CBSE 10th Result


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ವ್ಯವಸ್ಥಾಪಕರು(HR), ಕೈಗಾರಿಕಾ ಆರೋಗ್ಯ ಕೇಂದ್ರ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017 ಈ ವಿಳಾಸಕ್ಕೆ ಕಳುಹಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.