ಉಚಿತ ನರ್ಸಿಂಗ್ ತರಬೇತಿಗೆ ಇಲ್ಲೊಂದು ಸುವರ್ಣಾವಕಾಶ..!

  ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿಯಿಂದ ದಿ ಫ್ಯಾಮಿಲಿ ಪಿಲ್ಲರ್ ಅಲೈಯನ್ಸ್ ಸಂಸ್ಥೆಯು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ, ಮನೆ ಮತ್ತು ಆಸ್ಪತ್ರೆ ಆರೈಕೆ ಮಾಡುವವರಿಗೆ ಉಚಿತ ನರ್ಸಿಂಗ್ ತರಬೇತಿ ಮತ್ತು ಉದ್ಯೋಗ ಕಲ್ಪಿಸಿಕೊಡಲು ಅರ್ಹ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Mar 26, 2023, 03:19 PM IST
  • ಅಭ್ಯರ್ಥಿಗಳ ವಯೋಮಿತಿ 18-42 ಒಳಗಿರಬೇಕು,
  • ಕನಿಷ್ಠ 8 ನೇ ತರಗತಿ ಉತ್ತೀರ್ಣರಾಗಿರಬೇಕು,
  • ಸರಳ ಇಂಗ್ಲೀಷ್ ಗ್ರಹಿಕಾ ಸಾಮಥ್ರ್ಯ ಹೊಂದಿರಬೇಕು.
ಉಚಿತ ನರ್ಸಿಂಗ್ ತರಬೇತಿಗೆ ಇಲ್ಲೊಂದು ಸುವರ್ಣಾವಕಾಶ..! title=
ಸಾಂದರ್ಭಿಕ ಚಿತ್ರ

ಬಳ್ಳಾರಿ:  ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿಯಿಂದ ದಿ ಫ್ಯಾಮಿಲಿ ಪಿಲ್ಲರ್ ಅಲೈಯನ್ಸ್ ಸಂಸ್ಥೆಯು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ, ಮನೆ ಮತ್ತು ಆಸ್ಪತ್ರೆ ಆರೈಕೆ ಮಾಡುವವರಿಗೆ ಉಚಿತ ನರ್ಸಿಂಗ್ ತರಬೇತಿ ಮತ್ತು ಉದ್ಯೋಗ ಕಲ್ಪಿಸಿಕೊಡಲು ಅರ್ಹ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: "ಯಾರ್ಯಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ"

ಒಟ್ಟು 50 ಅಭ್ಯರ್ಥಿಗಳಿಗೆ ತರಬೇತಿ  ನೀಡಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ಇರುತ್ತದೆ.ತರಬೇತಿಯಲ್ಲಿ 30 ದಿನಗಳ ಪಠ್ಯ ಮತ್ತು 60 ದಿನಗಳ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳ ವಯೋಮಿತಿ 18-42 ಒಳಗಿರಬೇಕು, ಕನಿಷ್ಠ 8 ನೇ ತರಗತಿ ಉತ್ತೀರ್ಣರಾಗಿರಬೇಕು, ಸರಳ ಇಂಗ್ಲೀಷ್ ಗ್ರಹಿಕಾ ಸಾಮಥ್ರ್ಯ ಹೊಂದಿರಬೇಕು.

ಇದನ್ನೂ ಓದಿ : NIA : ಕುಕ್ಕರ್ ಬಾಂಬ್ ರೂವಾರಿ ಶಾರೀಖ್ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆ!

ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ.ವೃತ್ತ, ಪಾರ್ವತಿನಗರದ ಬಸವಭವನ ರಸ್ತೆಯ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಅಥವಾ ದೂ.08392-27398 9019847029, 9964502514, 8073852104, 984444958 ಗೆ ಸಂಪಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜಪ್ಪ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News