ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಸೇರಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ಹಾಗೂ ವಕೀಲ ವೃತ್ತಿಯ ತರಬೇತಿ ಭತ್ಯೆ ಮಂಜೂರಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Weather Report: ಮುಂಗಾರು ಆಗಮಿಸಿದೆಯಾ ಅಥವಾ ಇನ್ನೂ ನಿರೀಕ್ಷಿಸಬೇಕಾ? ಇಲ್ಲಿದೆ ಹವಾಮಾನ ಇಲಾಖೆಯ ಭವಿಷ್ಯವಾಣಿ


ಅಭ್ಯರ್ಥಿಯು ಬೆಂಗಳೂರು ನಗರ ಜಿಲ್ಲೆಗೆ ಸೇರಿದವರಾಗಿರಬೇಕು, ಅಭ್ಯರ್ಥಿಯು ವರ್ಗ-1, 2ಎ, 3ಎ, ಮತ್ತು 3ಬಿ ವರ್ಗಕ್ಕೆ ಸೇರಿದವರಾಗಿರಬೇಕು, ಪ್ರವರ್ಗ-1 ರಡಿ ಬರುವ ಅಭ್ಯರ್ಥಿಗಳಿಗೆ ರೂ.3,5೦,೦೦೦ ಗಳ ವಾರ್ಷಿಕ ಆದಾಯದ ಮಿತಿಯನ್ನು, 2ಎ, 3ಎ, ಮತ್ತು 3ಬಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.2,5೦,೦೦೦ ಗಳ ವಾರ್ಷಿಕ ಆದಾಯದ ಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೊಂದಾಯಿಸಿರಬೇಕು, ಅಭ್ಯರ್ಥಿಯು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 38 (2ಎ, 3ಎ, ಮತ್ತು 3ಬಿ ವರ್ಗಕ್ಕೆ) ಹಾಗೂ ಪ್ರವರ್ಗ-1ಕ್ಕೆ 4೦ ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ. ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2 ವರ್ಷದೊಳಗೆ ಇರುವ ಅಭ್ಯರ್ಥಿಗಳನ್ನು ಮಾತ್ರ ಅರ್ಹರಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿಯಲ್ಲಿ ಪ್ರತಿ ತಿಂಗಳಿಗೆ ರೂ.4000/- ಗಳ ಭತ್ಯೆ ನೀಡಲಾಗುವುದು.


ಇದನ್ನೂ ಓದಿ-Bhagalpur Bridge Collapse: ಕೆಲವೇ ಸೆಕೆಂಡ್ ಗಳಲ್ಲಿ ಗಂಗಾನದಿಗೆ ಆಹುತಿಯಾದ 1750 ಕೋಟಿ ರೂ. ವೆಚ್ಚದ ಸೇತುವೆ... ವಿಡಿಯೋ ನೋಡಿ


ಆಸಕ್ತ ಕಾನೂನು ಪದವೀಧರ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಗಳನ್ನು ಕಛೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು ಇವರ ಕಛೇರಿಗೆ ಜೂನ್ 30 ರಂದು ಸಂಜೆ 4.30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ: ೦8೦-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.