ಸ್ವಯಂ ಉದ್ಯಮ ಪ್ರಾರಂಭಿಸುವವರಿಗೆ ಇಲ್ಲೊಂದು ಮಹತ್ವದ ಅವಕಾಶ..!

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತರಿರುವರಿಗೆ ಕೊಪ್ಪಳದಲ್ಲಿ ಜನವರಿ 23 ರಿಂದ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Written by - Zee Kannada News Desk | Last Updated : Jan 20, 2023, 05:48 PM IST
  • ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  • ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು
  • ಮಹಿಳೆಯರಿಗೆ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು
ಸ್ವಯಂ ಉದ್ಯಮ ಪ್ರಾರಂಭಿಸುವವರಿಗೆ ಇಲ್ಲೊಂದು ಮಹತ್ವದ ಅವಕಾಶ..! title=
ಸಾಂದರ್ಭಿಕ ಚಿತ್ರ

ಬೆಂಗಳೂರು:  ಸ್ವಯಂ ಉದ್ಯಮ ಪ್ರಾರಂಭಿಸುವವರಿಗೆ ಕೊಪ್ಪಳದಲ್ಲಿ ಹತ್ತು ದಿನಗಳ ತರಬೇತಿಗಾಗಿ ಆಸಕ್ತರು ತಮ್ಮ ಹೆಸರುಗಳನ್ನು ಜನವರಿ 21 ರೊಳಗಾಗಿ ನೋಂದಾಯಿಸಿಕೊಳ್ಳಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತರಿರುವರಿಗೆ ಕೊಪ್ಪಳದಲ್ಲಿ ಜನವರಿ 23 ರಿಂದ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರಾ? ಎಂದಿದ್ದಕ್ಕೆ ಏನಂದ್ರು ಹಳ್ಳಿ ಹಕ್ಕಿ ವಿಶ್ವನಾಥ್

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು, ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು, ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. 

ಇದನ್ನೂ ಓದಿ: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಆಸಕ್ತರು ನೋಂದಣಿಯನ್ನು ಜನವರಿ 21 ರೊಳಗಾಗಿ ಮೊಬೈಲ್ ಮುಖಾಂತರ ತಮ್ಮ ಹೆಸರುವನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 6362557332/ 6362681190 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News