ಬೆಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಬ್ಯಾಂಕ್‌ಗಳಲ್ಲಿನ ಕ್ಲರ್ಕ್​ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ibps.in ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ನೇಮಕಾತಿ ವಿವರಗಳು:


ಬ್ಯಾಂಕ್ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)


ಉದ್ಯೋಗ ಸ್ಥಳ: ಅಖಿಲ ಭಾರತ


ಹುದ್ದೆಯ ಹೆಸರು: ಕ್ಲರ್ಕ್


ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.  


ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್; ವಿದ್ಯುತ್, ತರಕಾರಿ, ಮೊಟ್ಟೆ ಬೆನ್ನಲ್ಲೇ ಇದೀಗ ಹಾಲಿನ ಸರದಿ!


ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28 ವರ್ಷಕ್ಕಿಂತ ಹೆಚ್ಚಿರಬಾರದು.


ಮಾಸಿಕ ವೇತನ: ಈ ಹುದ್ದೆಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ.ನಿಂದ 47,920 ರೂ. ವೇತನ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.


ಪ್ರಮುಖ ದಿನಾಂಕ: ಜುಲೈ 1ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಶುಲ್ಕ ಪಾವತಿ ಮತ್ತು ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನಾಂಕವಾಗಿರುತ್ತದೆ.


ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬೇಕು.


ಇದನ್ನೂ ಓದಿ: 40 ಸಾವಿರ ರೂ,ಗೆ ಬಾಲಕಿ ಮಾರಾಟ, ಐವರ ಬಂಧನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.