IDBI Bank Recruitment 2022 Notification : ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ಬ್ಯಾಂಕ್ ಎಕ್ಸಿಕ್ಯೂಟಿವ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಎಎಂ ಗ್ರೇಡ್ ಎ) ಸೇರಿ ಒಟ್ಟು 1500 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್ idbibank.in ನಲ್ಲಿ ತನ್ನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಪ್ರಕ್ರಿಯೆಯು 3ನೇ ಜೂನ್ 2022 ರಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಲಿಖಿತ ಪರೀಕ್ಷೆ/ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಹುದ್ದೆಗ ಸಂಭದಿಸಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.


COMMERCIAL BREAK
SCROLL TO CONTINUE READING

ನೇಮಕಾತಿಯ ಪ್ರಮುಖ ದಿನಾಂಕ


ಐಡಿಬಿಐ ಅಧಿಸೂಚನೆಯ ಪ್ರಕಾರ, ಈ ಕಾರ್ಯನಿರ್ವಾಹಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯ ಪ್ರಕ್ರಿಯೆಯು ಜೂನ್ 3, 2022 ರಿಂದ ಪ್ರಾರಂಭವಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17ನೇ ಜೂನ್ 2022 ನಿಗದಿಪಡಿಸಲಾಗಿದೆ. ಎಲ್ಲಾ ಅಭ್ಯರ್ಥಿಗಳು ಜೂನ್ 17 ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫಾರ್ಮ್ ಅನ್ನು ಸಲ್ಲಿಸಬೇಕು. ಅದರ ನಂತರ ಅಪ್ಲಿಕೇಶನ್‌ನ ಲಿಂಕ್ ಅನ್ನು ಬಂದ್ ಮಾಡಲಾಗುತ್ತದೆ.


ಇದನ್ನೂ ಓದಿ : Job Alert : ಅಂಚೆ ಇಲಾಖೆಯಲ್ಲಿ 38,926 ಹುದ್ದೆಗಳಿಗೆ ಅರ್ಜಿ ಆಹ್ವಾನ : ಜೂನ್ 5 ಕೊನೆ ದಿನ!


ಖಾಲಿ ಹುದ್ದೆಗಳ ವಿವರ


ಅಧಿಸೂಚನೆಯ ಪ್ರಕಾರ, ಈ ನೇಮಕಾತಿ ಡ್ರೈವ್ ಅಡಿಯಲ್ಲಿ, ಬ್ಯಾಂಕ್ 1544 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಇವುಗಳಲ್ಲಿ 1044 ಕಾರ್ಯನಿರ್ವಾಹಕ ಮತ್ತು 500 ಸಹಾಯಕ ವ್ಯವಸ್ಥಾಪಕರ ಹುದ್ದೆಗಳು. ವರ್ಗವಾರು ಖಾಲಿ ಹುದ್ದೆಯನ್ನು ನೋಡಲು, ನೀವು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ನೋಡಬೇಕು.


ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿ


ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಹೊಂದಿರುವವರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. 


ವಯೋಮಿತಿ


ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20 ರಿಂದ 25 ವರ್ಷಗಳ ನಡುವೆ ಇರಬೇಕು. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 21 ರಿಂದ 28 ವರ್ಷ ವಯಸ್ಸಿನ ಮಿತಿಯನ್ನು ಕೋರಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ನೀವು ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಬಹುದು.


ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : SBI ನಲ್ಲಿ 40 ಹುದ್ದೆಗಳಿಗೆ ಅರ್ಜಿ, ಜೂನ್ 7 ಲಾಸ್ಟ್ ಡೇಟ್!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ