ಬೆಂಗಳೂರು: ದೇಶದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಮೇಳ ನಡೆದರೆ ಅದು ನಮ್ಮ ಸರ್ಕಾರದಿಂದ ಮಾತ್ರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಇದು ಎನ್‌ಡಿಎ ಕೊನೆಯ ಚುನಾವಣೆ, ಮೋದಿ ಸರ್ಕಾರ ಅಂತ್ಯವಾಗುತ್ತೆ ಎಂದು ಭವಿಷ್ಯ ನುಡಿದ ಶಾಸಕ ಅಬ್ಬಯ್ಯಾ ಪ್ರಸಾದ್
ಯಾವುದೇ ವಿದ್ಯಾರ್ಹತೆ ಹೊಂದಿರುವ ನಾಡಿನ ಎಲ್ಲಾ ಯುವಜನತೆಗೆ ಉದ್ಯೋಗ ಅವಕಾಶ ಕಲ್ಪಿಸುವ ಯುವ ಸಮೃದ್ಧಿ ಸಮ್ಮೇಳನ ಮೆಗಾ ಉದ್ಯೋಗ ಮೇಳ-2024 ಇದೇ ತಿಂಗಳ 26 & 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ದೇಶದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಮೇಳ ನಡೆದರೆ ಅದು ನಮ್ಮ ಸರ್ಕಾರದಿಂದ ಮಾತ್ರ. ಇಲ್ಲಿರುವ ಮಾನವ ಸಂಪನ್ಮೂಲ, ಮೂಲ ಸೌಕರ್ಯಗಳು ಸೇರಿದಂತೆ ಹಲವಾರು ಕಾರಣಗಳಿಂದ ದೊಡ್ಡ ದೊಡ್ಡ ಕಂಪನಿಗಳು ಮುಂದೆ ಬಂದಿವೆ. ಯುವಜನತೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿ, ನಾವು ಉದ್ಯೋಗವನ್ನಷ್ಟೇ ಅಲ್ಲದೇ, ಯುವಕರ ಕೌಶಲ್ಯ ಅಂತರವನ್ನು ಸರಿಪಡಿಸಲು ಸೂಕ್ತ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತದೆ.
ಇದನ್ನೂ ಓದಿ: ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಪ್ರಧಾನಿ ಮಂತ್ರಿಗಳು ವರ್ಷಕ್ಕೆ 2 ಕೋಟಿ ಉದ್ಯೋಗ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಅವರ ಭರವಸೆ ಕೇವಲ ಭಾಷಣಕಷ್ಟೇ ಸೀಮಿತವಾಗಿ ಇಂದಿಗೂ ಭರವಸೆಯಾಗೇ ಉಳಿದಿದೆ. ಎನ್ ಎಸ್ ಓ ಸರ್ವೆ ಗಳಿಂದ ಬಂದಿರುವ ಮಾಹಿತಿ ಪ್ರಕಾರ ಇದುವರೆಗೂ ಸುಮಾರು 40 ಸಾವಿರ ಉದ್ಯೋಗಗಳನ್ನು ನಾವು ಕಳೆದುಕೊಂಡಿದ್ದೇವೆ. ಈ ವರದಿ ಬಂದ ಮೇಲೆ ಎನ್‍ಎಸ್‍ಓ ಸರ್ವೆಗಳು ನಿಲ್ಲಿಸಿಬಿಟ್ಟರು ಎಂದು ಹೇಳಿದರು.
ಅದೇ ನಮ್ಮ ಯುಪಿಎ ಸರ್ಕಾರ ಉದ್ಯೋಗ ಸೃಷ್ಟಿಗಾಗಿ 10 ಸಾವಿರ ಐಟಿಗಳನ್ನು ಸ್ಥಾಪನೆ ಮಾಡಿತ್ತು. ಈಗ ನಮ್ಮ ರಾಜ್ಯ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಮಹತ್ವದ ಹೆಜ್ಜೆಯನ್ನಿಡಲು ಹೊರಟಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳ ಪಾಲ್ಗೊಳ್ಳಲಿದ್ದು, ಅಭ್ಯರ್ಥಿಗಳ ಉದ್ಯೋಗ ಒದಗಿಸಲು 600 ಸ್ಟಾಲ್ ಅಳವಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 18005999918 ಕರೆ ಮಾಡಿ ಎಂದು ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.