ಸಂಗೀತವೇ ನಿಮ್ಮ ಕನಸಾಗಿದ್ದರೆ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ...!

ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳ ವಯೋಮಿತಿ 16 ರಿಂದ 30 ವರ್ಷದ ಒಳಗಿರಬೇಕು.ಗುರುಗಳ ಬಳಿ ಕನಿಷ್ಠ 2 ವರ್ಷ ಅಭ್ಯಾಸ ಮಾಡಿರಬೇಕಾಗಿದ್ದು, ಗುರುಗಳ ಪ್ರಮಾಣ ಪತ್ರ ಲಗತ್ತಿಸಬೇಕು. ಓದು ಬರಹ ಬಲ್ಲವರಾಗಿರಬೇಕು. ಕಲಿಯುವ ಆಸಕ್ತಿಯಿದ್ದು, ಹೆಚ್ಚಿನ ಅಭ್ಯಾಸ ಮಾಡುವ ಉತ್ಸುಕತೆಯಿರಬೇಕು.

Written by - Zee Kannada News Desk | Last Updated : Feb 15, 2023, 05:42 PM IST
  • ಪ್ರತಿಷ್ಠಿತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿರಬೇಕು.
  • ಸಂಸ್ಥೆ, ನೋಂದಣಿ ಹಾಗೂ ನವೀಕರಣ ಪತ್ರ ಲಗತ್ತಿಸಬೇಕು.
  • ಗುರು ಶಿಷ್ಯ ಪರಂಪರೆ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಶಿಬಿರಾರ್ಥಿಗಳು ಅಕಾಡೆಮಿ ಕಚೇರಿ ವೇಳೆಯ (ಬೆಳಗ್ಗೆ 10 ರಿಂದ ಸಂಜೆ 5.30ಅ) ಒಳಗಾಗಿ ಪಡೆಯಬಹುದಾಗಿದೆ
ಸಂಗೀತವೇ ನಿಮ್ಮ ಕನಸಾಗಿದ್ದರೆ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ...! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ 2022-23ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಗುರುಶಿಷ್ಯ ಪರಂಪರೆ ತರಬೇತಿ ಶಿಬಿರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಘಟಕ ಯೋಜನೆಯ ಗುರುವ ಪರಂಪರೆಯಲ್ಲಿ ಅಕಾಡೆಮಿ ವ್ಯಾಪ್ತಿಯೊಳಗೆ ಬರುವ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ, ಭರತನಾಟ್ಯ, ಕಥಕ್, ಕೂಚಿ ಪುಡಿ) ಕಥಾಕೀರ್ತನ ಮತ್ತು ಗಮಕ ಕ್ಷೇತ್ರಗಳಲ್ಲಿ ಯುವ ಕಲಾವಿದರಲ್ಲಿ ಕಲಾನೈಪುಣ್ಯತೆಯನ್ನು ಹಚ್ಚಿಸುವ ಸಲುವಾಗಿ ಪ್ರತಿಷ್ಠಿತ ಸಂಸ್ಥೆಯ ಗುರುಗಳ ಮೂಲಕ 5(ಐದು) ತಿಂಗಳ ಸಂಗೀತ ನೃತ್ಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲು ಅಕಾಡೆಮಿಯಿಂದ ನಿರ್ಧರಿಸಲಾಗಿದೆ.

ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳ ವಯೋಮಿತಿ 16 ರಿಂದ 30 ವರ್ಷದ ಒಳಗಿರಬೇಕು. ಗುರುಗಳ ಬಳಿ ಕನಿಷ್ಠ 2 ವರ್ಷ ಅಭ್ಯಾಸ ಮಾಡಿರಬೇಕಾಗಿದ್ದು, ಗುರುಗಳ ಪ್ರಮಾಣ ಪತ್ರ ಲಗತ್ತಿಸಬೇಕು. ಓದು ಬರಹ ಬಲ್ಲವರಾಗಿರಬೇಕು. ಕಲಿಯುವ ಆಸಕ್ತಿಯಿದ್ದು, ಹೆಚ್ಚಿನ ಅಭ್ಯಾಸ ಮಾಡುವ ಉತ್ಸುಕತೆಯಿರಬೇಕು.

ಇದನ್ನೂ ಓದಿ: ‘ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಎದ್ವಾತದ್ವಾ ಲೂಟಿ ಮಾಡಲು ಆರಂಭ ಮಾಡಿದೆ”

ಪ್ರತಿಷ್ಠಿತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿರಬೇಕು. ಸಂಸ್ಥೆ, ನೋಂದಣಿ ಹಾಗೂ ನವೀಕರಣ ಪತ್ರ ಲಗತ್ತಿಸಬೇಕು. ಗುರು ಶಿಷ್ಯ ಪರಂಪರೆ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಶಿಬಿರಾರ್ಥಿಗಳು ಹಾಗೂ ಪ್ರತಿಷ್ಠಿತ ಸಂಸ್ಥೆಗಳ ಗುರುಗಳು ನಿಗದಿತ ಅರ್ಜಿಯನ್ನು ಅಕಾಡೆಮಿ ಕಚೇರಿ ವೇಳೆಯ (ಬೆಳಗ್ಗೆ 10 ರಿಂದ ಸಂಜೆ 5.30) ಒಳಗಾಗಿ ಪಡೆಯಬಹುದಾಗಿದೆ ಅಥವಾ ಅಕಾಡೆಮಿಯ ಅಂತರ್ಜಾಲತಾಣ https://sangeetanrityaacademy.karnataka.gov.in ಮೂಲಕ ಪಡೆದು ಸಲ್ಲಿಸಬಹುದಾಗಿದೆ. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: MLA Satish Reddy : ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸ್ಕೆಚ್ : ದೂರಿನ ಹಿಂದಿದೆಯಾ ಚುನಾವಣೆ ಗಿಮಿಕ್..?

ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನತ್ತು ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಬೆಂಗಳೂರು -2 ಇಲ್ಲಿಗೆ ಫೆಬ್ರವರಿ 28 ರೊಳಗಾಗಿ ಕಳುಹಿಸಿಕೊಡಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಬಂದ ಅರ್ಜಿಗಳನ್ನಾಧರಿಸಿ, ಅಕಾಡೆಮಿಯಿಂದ ಪ್ರತಿಷ್ಠಿತ ಸಂಸ್ಥೆಯ ಗುರುಗಳನ್ನು ಆಯ್ಕೆ ಮಾಡಲಾಗುವುದು. ಗುರುಗಳಿಗೆ ಗೌರವಧನ, ಶಿಬಿರಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಅಕಾಡೆಮಿಯಿಂದ ನೀಡಲಾಗುವುದು. ಅಕಾಡೆಮಿ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ರಿಜಿಸ್ಟ್ರಾರ್ ಬಿ.ನೀಲಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News