IFFCO Recruitment 2024: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಮಾರ್ಚ್​ 30 ಅಂದರೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿರುತ್ತದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ 23 ಸಾವಿರ ಹಣ ಸೀಜ್‌


ಹುದ್ದೆಯ ವಿವರ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮೆಡಿಕಲ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 


ವಿದ್ಯಾರ್ಹತೆ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹2 ಲಕ್ಷ ವೇತನ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಅಖಿಲ ಭಾರತ


ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ 30/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 15


ಇದನ್ನೂ ಓದಿ: ಎಲ್ಲೆಡೆ ರಂಗೇರಿದ ಲೋಕಸಭಾ ಚುನಾವಣೆ ಕಾವು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.