IFSCA Recruitment 2024: ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಆಫೀಸರ್ ಗ್ರೇಡ್ ʼಎʼ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: OMG: 10 ಕೋಟಿ ಲಾಟರಿ ಗೆದ್ದು ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಆಟೋ ಚಾಲಕ!


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷಗಳಿಗೆ, PwBD (UR) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 13 ವರ್ಷ ಮತ್ತು PwBD (SC/ST) ಅಭ್ಯರ್ಥಿಗಳಿಗೆ 15 ವರ್ಷ


ವೇತನ: ಮಾಸಿಕ ₹44,500-₹1,43,000


ಉದ್ಯೋಗದ ಸ್ಥಳ: ಕರ್ನಾಟಕ ಸೇರಿ ಭಾರತದಾದ್ಯಂತ 


ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ 100 ರೂ. ಮತ್ತು UR/OBC/EWS ಅಭ್ಯರ್ಥಿಗಳಿಗೆ 1,000 ರೂ.


ಪಾವತಿ ವಿಧಾನ: ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು


ಆಯ್ಕೆ ಪ್ರಕ್ರಿಯೆ: ಆನ್​​ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ https://ibpsonline.ibps.in/ifscaofeb24/applyಗೆ ಭೇಟಿ ನೀಡಬಹುದು. ಏಪ್ರಿಲ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: Loksabha election 2024: ರಾಜಕೀಯ ಪಕ್ಷಗಳು ಎಲ್ಲಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಏಕಕಾಲಕ್ಕೆ ಬಿಡುಗಡೆಮಾಡುವುದಿಲ್ಲವೇಕೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.