ಕುಶಲಕರ್ಮಿಗಳಿಗಾಗಿ ನೂತನ ಪಿಎಂ ವಿಶ್ವಕರ್ಮ ಯೋಜನೆ ಜಾರಿ ; ಅರ್ಹರಿಂದ ನೊಂದಣಿ ಮತ್ತು ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರವು ಪಿ.ಎಂ-ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು ನವೆಂಬರ್ 17 ರಂದು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಐ.ಡಿ. ಕಾರ್ಡ್, ಕೌಶಲ್ಯಾಭಿವೃದ್ಧಿ ತರಬೇತಿ, ಸುಧಾರಿತ ಉಪಕರಣಗಳಿಗೆ ಪ್ರೋತ್ಸಾಹ, ಸಾಲ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯ ಸವಲತ್ತುಗಳನ್ನು ನೀಡಲಾಗುವುದು.
ಧಾರವಾಡ: ಭಾರತ ಸರ್ಕಾರವು ಪಿ.ಎಂ-ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು ನವೆಂಬರ್ 17 ರಂದು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಐ.ಡಿ. ಕಾರ್ಡ್, ಕೌಶಲ್ಯಾಭಿವೃದ್ಧಿ ತರಬೇತಿ, ಸುಧಾರಿತ ಉಪಕರಣಗಳಿಗೆ ಪ್ರೋತ್ಸಾಹ, ಸಾಲ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯ ಸವಲತ್ತುಗಳನ್ನು ನೀಡಲಾಗುವುದು.
ಈ ಯೋಜನೆಯಲ್ಲಿ ಬಡಗಿತನ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರ, ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಿಕೆ, ಬೀಗ ತಯಾರಕರು. ಶಿಲ್ಪಕಲೆ, ಕಲ್ಲುಪುಡಿ ಮಾಡುವವರು, ಬಂಗಾರದ ಆಭರಣ ತಯಾರಿಕೆ (ಅಕ್ಕಸಾಲಿಗರು), ಕುಂಬಾರಿಕೆ, ಪಾದರಕ್ಷೆ, ಚರ್ಮಗಾರಿಕೆ ತಯಾರಿಕೆ, ಅನುವಂಶಿಕ ರಾಜ ಮೇಸ್ತ್ರಿ (ಬಂಡಿವಡ್ಡರ), ಕಸಬರಿಗೆ, ಬಾಸ್ಕೆಟ್, ಮ್ಯಾಟ್, ಬಿದಿರಿನ ಉತ್ಪನ್ನ ತಯಾರಿಕೆ, ತೆಂಗಿನ ನಾರಿನ ಉತ್ಪನ್ನ ತಯಾರಕರು, ಗೊಂಬೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಧೋಬಿ, ಸಿಂಪಿಗರು ಹಾಗೂ ಮೀನಿನ ಬಲೆಗಳನ್ನು ತಯಾರಿಸುವವರು. ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ನಗರ, ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಸಾಮಾನ್ಯ ಸೇವಾ ಕೇಂದ್ರ (CSC) ದಲ್ಲಿ ನೊಂದಣಿಯನ್ನು ಮಾಡಬಹುದಾಗಿದೆ.
ಇದನ್ನೂ ಓದಿ: "ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು"
ನೊಂದಣಿಗೆ ಇರುವ ಅರ್ಹತೆಗಳು: ಕುಶಲಕರ್ಮಿಗಳು 18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು, 18 ವರ್ಷ ಮೇಲ್ಪಟ್ಟವರಾಗಿರಬೇಕು, ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು, ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕುಶಲಕರ್ಮಿಗಳು ಪಿಎಂಇಜಿಪಿ, ಮುದ್ರಾ ಮತ್ತು ಸ್ವ-ನಿಧಿ ಯೋಜನೆಯಡಿಯಲ್ಲಿ ಯಾವುದೇ ತರಹ ಸಾಲವನ್ನು ಪಡೆದಿರಬಾರದು. ಮುದ್ರಾ ಮತ್ತು ಸ್ವನಿಧಿ ಯೋಜನೆಯಡಿ ಸಾಲ ಪಡೆದು ಮರುಪಾವತಿ ಮಾಡಿದ್ದರೆ ಅಂತವರು ಅರ್ಜಿ ಸಲ್ಲಿಸಬಹುದು.
ತರಬೇತಿ ವಿವರ: ಕುಶಲಕರ್ಮಿಗಳಿಗೆ ನೊಂದಣಿಯಾದ ನಂತರ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ದಿನಕ್ಕೆ ರೂ.500 ಕನಿಷ್ಟ ವೇತನ ನೀಡಲಾಗುವುದು. ತರಬೇತಿಯ ನಂತರ ಪ್ರಮಾಣ ಪತ್ರದೊಂದಿಗೆ ರೂ. 15 ಸಾವಿರ ಬೆಲೆಬಾಳುವ ಉಪಕರಣವನ್ನು ನೀಡಲಾಗುವುದು. ನಂತರ ಶೇ.5 ಬಡ್ಡಿದರದಲ್ಲಿ ಮೊದಲ ಹಂತದಲ್ಲಿ ರೂ. 1 ಲಕ್ಷಗಳನ್ನು ಸಾಲವಾಗಿ ನೀಡಲಾಗುವುದು. ತದನಂತರ 15 ದಿವಸಗಳವರೆಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಿ ಈಗಾಗಲೇ ಪಡೆದರೂ. 1 ಲಕ್ಷಗಳ ಸಾಲ ಮರುಪಾವತಿಯಾದ ನಂತರ ಎರಡನೇ ಹಂತದಲ್ಲಿ ರೂ. 2 ಲಕ್ಷಗಳ ಸಾಲವನ್ನು ಶೇ.5ರ ಬಡ್ಡಿದರದಲ್ಲಿ ನೀಡಲಾಗುವುದು ಹಾಗೂ ತಾವು ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು.
ಇದನ್ನೂ ಓದಿ:ಬಳ್ಳಾರಿ ಎಂಪಿ ದೇವೇಂದ್ರಪ್ಪ ಮಗನಿಂದ ಯುವತಿಯ ವಂಚನೆ
ಕುಶಲಕರ್ಮಿಗಳು ಸಂಬಂಧಿಸಿದ ತಮ್ಮ ಗ್ರಾಮ ನಗರ, ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೇವಾ ಕೇಂದ್ರ (CSC) ದಲ್ಲಿ ತ್ವರಿತವಾಗಿ ನೊಂದಣಿ ಮಾಡಿಕೊಳ್ಳಲು ತಾಂತ್ರಿಕ ನಿರ್ವಹಣೆಯಲ್ಲಿ ಸಮಸ್ಯೆ ಇದ್ದಲ್ಲಿ ಪ್ರವೀಣ ನವಲಗುಂದ, ಡಿಸ್ಟ್ರಿಕ್ ಮ್ಯಾನೆಜರ್, ಸಿ.ಎಸ್.ಸಿ, ಧಾರವಾಡ ಮೊ.ಸಂ:7217687808 ಇವರನ್ನು ಸಂಪರ್ಕಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಧಾರವಾಡ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಕೌಶಲ್ಯಭಿವೃದ್ದಿ ಇಲಾಖೆ, ರಾಯಾಪೂರ ಕಛೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.