ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಮತ್ತು ಪ್ರೌಢಶಾಲಾ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

2021-22ನೇ ಸಾಲಿಗೆ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (6ನೇ ತರಗತಿಯಿಂದ 10ನೇ ತರಗತಿಯವರೆಗೆ) ವಾರ್ಷಿಕ ರೂ 10 ಸಾವಿರಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದೆ.


ಇದನ್ನೂ ಓದಿ: "ಅಲ್ಪಸಂಖ್ಯಾತರು, ದಲಿತರನ್ನು ಬಳಸಿಕೊಂಡು ಸಿದ್ದರಾಮಯ್ಯ ಸಿಎಂ ಆದರು"


ಈ ಯೋಜನೆಯ ಪ್ರೋತ್ಸಾಹ ಪಡೆಯುವ ಅಭ್ಯರ್ಥಿಯು 2021-22ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2021ರ ಏಪ್ರೀಲ್ 01 ರಿಂದ 2022ರ ಮಾರ್ಚ್ 31 ರವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2021ರ ಏಪ್ರೀಲ್ 01 ರಿಂದ 2022ರ ಮಾರ್ಚ್ 31ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.


ಇದನ್ನೂ ಓದಿ: ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ರಾ ಮಾಜಿ ಸಂಸದ ಶಿವರಾಮೇಗೌಡ!?


ಅಲ್ಲದೇ ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟಗಳಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು, ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10 ಸಾವಿರಗಳನ್ನು ಮಾತ್ರ ಮಂಜೂರು ಮಾಡಲಾಗುವುದು.


ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಇಲಾಖೆಯ ಅಧಿಕೃತ ಜಾಲತಾಣ  http://serviceonline.gov.in/karnataka ಮೂಲಕ ಜೂನ್ 30 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.