India Postal Department: ಪೋಸ್ಟ್​ ಆಫೀಸ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿರಿ

Post Office Recruitment 2024: ಕರ್ನಾಟಕದಲ್ಲಿ 22 ಪೋಸ್ಟ್​ಮ್ಯಾನ್ ಮತ್ತು ಪೋಸ್ಟಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇವೆ. ಏಪ್ರಿಲ್ 3 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ​

Written by - Puttaraj K Alur | Last Updated : Apr 2, 2024, 03:50 PM IST
India Postal Department: ಪೋಸ್ಟ್​ ಆಫೀಸ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿರಿ title=
Post Office Recruitment 2024

Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 22 ಪೋಸ್ಟ್​ಮ್ಯಾನ್ ಮತ್ತು ಪೋಸ್ಟಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇವೆ. ಏಪ್ರಿಲ್ 3 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.  

ಹುದ್ದೆಯ ಮಾಹಿತಿ: 6 ಪೋಸ್ಟಲ್ ಅಸಿಸ್ಟೆಂಟ್, 3 ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು 13 ಪೋಸ್ಟ್​ಮ್ಯಾನ್ ಸೇರಿದಂಎತ ಒಟ್ಟು 22 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 

ಇದನ್ನೂ ಓದಿ: ಜಿಎಸ್ ಟಿ ಸಂಗ್ರಹದಿಂದ ಸರ್ಕಾರದ ಖಜಾನೆಗೆ ಬಂತು 1.78 ಲಕ್ಷ ಕೋಟಿ ರೂ.!

ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. ಸಹಾಯಕ ನಿರ್ದೇಶಕರು (R&E), ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಕರ್ನಾಟಕ ವೃತ್ತ, ಬೆಂಗಳೂರು-560001

ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು ʼಪ್ಲ್ಯಾನೆಟ್ ಆಫ್ ಲವ್ʼ ಎಂದು ಕರೆಯಲಾಗುತ್ತದೆ?

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/02/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 3

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News