Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 22 ಪೋಸ್ಟ್​ಮ್ಯಾನ್ ಮತ್ತು ಪೋಸ್ಟಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇವೆ. ಏಪ್ರಿಲ್ 3 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.  


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: 6 ಪೋಸ್ಟಲ್ ಅಸಿಸ್ಟೆಂಟ್, 3 ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು 13 ಪೋಸ್ಟ್​ಮ್ಯಾನ್ ಸೇರಿದಂಎತ ಒಟ್ಟು 22 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 


ಇದನ್ನೂ ಓದಿ: ಜಿಎಸ್ ಟಿ ಸಂಗ್ರಹದಿಂದ ಸರ್ಕಾರದ ಖಜಾನೆಗೆ ಬಂತು 1.78 ಲಕ್ಷ ಕೋಟಿ ರೂ.!


ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. ಸಹಾಯಕ ನಿರ್ದೇಶಕರು (R&E), ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಕರ್ನಾಟಕ ವೃತ್ತ, ಬೆಂಗಳೂರು-560001


ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು ʼಪ್ಲ್ಯಾನೆಟ್ ಆಫ್ ಲವ್ʼ ಎಂದು ಕರೆಯಲಾಗುತ್ತದೆ?


ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/02/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 3


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.