ನವದೆಹಲಿ: SSLC ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ವಾಯುಪಡೆಯ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  


COMMERCIAL BREAK
SCROLL TO CONTINUE READING

ಹುದ್ದೆಗಳ ವಿವರ: ಇಂಡಿಯನ್ ಏರ್‍ಫೋರ್ಸ್ (IAF)ನಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


ಇದನ್ನೂ ಓದಿ: ಮಂಡ್ಯದಲ್ಲಿ ಮತ್ತಷ್ಟು ʼಕಾವೇರಿʼದ ರೈತರದ ಪ್ರತಿಭಟನೆ


ಶೈಕ್ಷಣಿಕ ಅರ್ಹತೆ: ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.


ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷದೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸ್ಟ್ರೀಮ್ ಸೂಕ್ತತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.


ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ರಿಂದ 40 ಸಾವಿರ ರೂ. ನೀಡಲಾಗುತ್ತದೆ.


ಪ್ರಮುಖ ದಿನಾಂಕ: ಸೆಪ್ಟೆಂಬರ್ 16ರಂದು ನೇರ ಸಂದರ್ಶನ ನಡೆಯಲಿದ್ದು, ಸೆ.12-17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ.12-16ರವರೆಗೆ ನಡೆಯಲಿದೆ. ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೆ.1 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು indianairforce.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ.


ಇದನ್ನೂ ಓದಿ: ಬೆಂಗಳೂರು, ತುಮಕೂರು ಸೇರಿದಂತೆ 14 ಸ್ಥಳಗಳಲ್ಲಿ ಮೆಗಾ ರೇಡ್‌


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.