Indian Army Recruitment 2024: ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಭಾರತೀಯ ಸೇನೆಯು ಅಧಿಸೂಚನೆ ಹೊರಡಿಸಿದ್ದು, ನೀವು ಎಂಜಿನಿಯರಿಂಗ್ ಪದವೀಧರರಾಗಿದ್ದರೆ ಇದು ಸುವರ್ಣ ಅವಕಾಶವಾಗಿದೆ. 


COMMERCIAL BREAK
SCROLL TO CONTINUE READING

ಹೌದು, ಭಾರತೀಯ ಸೇನೆಯು 140ನೇ ತಾಂತ್ರಿಕ ಪದವಿ ಕೋರ್ಸ್ (TGC-140)ಗಾಗಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಮೂಲಕ ಒಟ್ಟು 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಲು ಮೇ 9 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  


ಇದನ್ನೂ ಓದಿ: 4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿ


ಹುದ್ದೆಗಳ ವಿವರ: 7 ಸಿವಿಲ್, 7 ಕಂಪ್ಯೂಟರ್ ಸೈನ್ಸ್, 3 ಎಲೆಕ್ಟ್ರಿಕಲ್, 4 ಎಲೆಕ್ಟ್ರಾನಿಕ್ಸ್, 7 ಮೆಕ್ಯಾನಿಕಲ್ ಮತ್ತು 2 ವಿವಿಧ ಇಂಜಿನಿಯರಿಂಗ್ ಸ್ಟ್ರೀಮ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 


ವಿದ್ಯಾರ್ಹತೆ: ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.


ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 20 ವರ್ಷಗಳು ಮತ್ತು ಗರಿಷ್ಠ ವಯಸ್ಸಿನ ಮಿತಿ 27 ವರ್ಷಗಳು ಇರಬೇಕು.


ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉದ್ಯೋಗದ ಆಧಾರದ ಮೇಲೆ 56,100-2,50,000 ರೂ.ವರೆಗೂ ಸಂಬಳ ನೀಡಲಾಗುತ್ತದೆ.  


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಕೇಂದ್ರಗಳಲ್ಲಿ ಕಟ್‌ಆಫ್ ಶೇಕಡಾವಾರು ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನ ಮಾಡಲಾಗುತ್ತದೆ. 


ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ www.joinindianarmy.nic.in/Authentication.aspx ಗೆ ಭೇಟಿ ನೀಡಬಹುದು.


ಇದನ್ನೂ ಓದಿ: ಜಾಗತಿಕ ತಾಪಮಾನ ಏರಿಕೆಯಿಂದಾಗಿ ಈ ಹಿಮನದಿ ಸರೋವರಗಳು ಅಪಾಯದಲ್ಲಿದೆ : ಇಸ್ರೋ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.