Indian Institute of Management Bangalore Recruitment 2024: ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಟೆಕ್ನೋ-ಫಂಕ್ಷನಲ್ ಸ್ಪೆಷಲಿಸ್ಟ್​-ಪೀಪಲ್ ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾರ್ಚ್‌ 28ರವರೆಗೆ ED ಕಸ್ಟಡಿಗೆ ದೆಹಲಿ ಸಿಎಂ


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅನುಭವ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಪೀಪಲ್​ಸಾಫ್ಟ್​ ಕ್ಯಾಂಪಸ್ ಸೊಲ್ಯೂಶನ್ಸ್​ನಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


ವೇತನ: ವಾರ್ಷಿಕ ಸ್ಯಾಲರಿ ಪ್ಯಾಕೇಜ್ 25 ಲಕ್ಷ ರೂ. ಇರುತ್ತದೆ


ಉದ್ಯೋಗದ ಸ್ಥಳ: ಬೆಂಗಳೂರು


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  


ಇದನ್ನೂ ಓದಿ: ಮೆಟ್ರೋ ರೈಲು ಸಂಚಾರದ ಅವಧಿಯಲ್ಲಿ ಬದಲಾವಣೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ