ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 400 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿರಿ

Bank Job Alert: ನೀವು ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ ಇಲ್ಲಿದೆ ನಿಮಗೆ ಗುಡ್‌ ನ್ಯೂಸ್. ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ...  

Written by - Puttaraj K Alur | Last Updated : May 19, 2025, 10:10 PM IST
  • ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ
  • ಈ ನೇಮಕಾತಿ ಮೂಲಕ ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ಮೇ 21 ಆಗಿರುತ್ತದೆ
ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 400 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿರಿ

Bank Job Alert: ನೀವು ಬ್ಯಾಂಕ್ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ ಮತ್ತು ಸರ್ಕಾರಿ ಕೆಲಸದ ಆಸೆ ಇದ್ದರೆ ಇಲ್ಲಿದೆ ಗುಡ್‌ ನ್ಯೂಸ್. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iob.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. 

Add Zee News as a Preferred Source

ನೇಮಕಾತಿ ಅಭಿಯಾನದ ಮೂಲಕ ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 21 ಆಗಿರುತ್ತದೆ. ಅಭ್ಯರ್ಥಿಗಳ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನ ತಿಳಿದುಕೊಳ್ಳುವ ಮೂಲಕ ಅರ್ಜಿ ಸಲ್ಲಿಸಬಹುದು.   

ಇದನ್ನೂ ಓದಿ: EPFO: ಇನ್ಮುಂದೆ ಯುಪಿಐ ಮೂಲಕವೇ ತ್ವರಿತವಾಗಿ ಪಿ‌ಎಫ್ ಹಣ ವಿತ್ ಡ್ರಾ ಮಾಡಬಹುದು! ಹೇಗ್ ಗೊತ್ತಾ...

ಹುದ್ದೆಯ ವಿವರಗಳು

ತಮಿಳುನಾಡು – 260 ಹುದ್ದೆಗಳು
ಒಡಿಶಾ – 10 ಹುದ್ದೆಗಳು
ಮಹಾರಾಷ್ಟ್ರ – 45 ಹುದ್ದೆಗಳು
ಗುಜರಾತ್ – 30 ಹುದ್ದೆಗಳು
ಪಶ್ಚಿಮ ಬಂಗಾಳ – 34 ಹುದ್ದೆಗಳು
ಪಂಜಾಬ್ – 21 ಹುದ್ದೆಗಳು

ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20 ರಿಂದ 30 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ನಂತರ ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT) ಮತ್ತು ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು LPTಗೆ ಕರೆಯಲಾಗುತ್ತದೆ ಮತ್ತು ಆನ್‌ಲೈನ್ ಪರೀಕ್ಷೆ ಮತ್ತು LPT ಎರಡರಲ್ಲೂ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪರೀಕ್ಷೆಯ ಮಾದರಿ: ಲಿಖಿತ ಪರೀಕ್ಷೆಯು ಆನ್‌ಲೈನ್‌ನಲ್ಲಿ ನಡೆಯಲಿದ್ದು, 200 ಅಂಕಗಳ 140 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯ ಅವಧಿ 3 ಗಂಟೆಗಳಾಗಿರುತ್ತದೆ. ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಅಭ್ಯರ್ಥಿಯು ತಪ್ಪು ಉತ್ತರ ನೀಡಿರುವ ಪ್ರತಿಯೊಂದು ಪ್ರಶ್ನೆಗೆ, ಸರಿಯಾದ ಅಂಕಗಳನ್ನು ಪಡೆಯಲು, ಆಯಾ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳಿಂದ 1/4 ಅಥವಾ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಇದನ್ನೂ ಓದಿ: ಆಭರಣ ಪ್ರಿಯರೇ ಬೊಂಬಾಟ್‌ ಸುದ್ದಿ... ಭಾರತದಲ್ಲಿ ಚಿನ್ನದ ಬೆಲೆ ರೂ. 44,700 ಕುಸಿತ! ಮತ್ತೆ ಕೈಗೆಟಕುವ ದರದಲ್ಲಿ ಸಿಗಲಿದೆ ಬಂಗಾರ

ಅರ್ಜಿ ಶುಲ್ಕಗಳು: ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ವರ್ಗಕ್ಕೆ ಅರ್ಜಿ ಶುಲ್ಕ ₹850/-. SC/ST/PwBD (ಮಾಹಿತಿ ಶುಲ್ಕ ಮಾತ್ರ)ಗೆ ₹175/- ಶುಲ್ಕ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/BHIM/UPI ಇತ್ಯಾದಿಗಳನ್ನು ಬಳಸಿಕೊಂಡು ಪಾವತಿ ಮಾಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News