Indian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Railway Recruitment 2024: ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
Indian Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಬಿಸಿಎ/ಬಿಟೆಕ್ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಪೂರ್ಣಗೊಳಿಸಿದವರು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ನಿರಂತರ ಮಳೆ, ಶೀತಗಾಳಿ ಹಿನ್ನೆಲೆಯಲ್ಲಿ ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ
ವಯಸ್ಸು: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 36 ವರ್ಷಗಳ ನಡುವೆ ಇರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,400 ರೂ. ವೇತನ ನೀಡಲಾಗುತ್ತದೆ. ಇದಲ್ಲದೆ ಸರ್ಕಾರ ನೀಡುವ ಇತರ ಪ್ರಯೋಜನಗಳು ದೊರೆಯಲಿವೆ.
ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು ಮತ್ತು SC/ST ಅಭ್ಯರ್ಥಿಗಳು 250 ರೂ. ಮತ್ತು OBC ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಇದನ್ನೂ ಓದಿ: Kargil Vijay Diwas: ʼಕಾರ್ಗಿಲ್ ವಿಜಯ ದಿವಸʼ 25ನೇ ವಾರ್ಷಿಕೋತ್ಸವ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ
ಪರೀಕ್ಷಾ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.