Indian Railway Recruitment 2024: ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: 38 ಕಾರ್ಪೆಂಟರ್, 100 COPA, 10 ಡ್ರಾಫ್ಟ್ಸ್​ಮ್ಯಾನ್, 137 ಎಲೆಕ್ಟ್ರಿಷಿಯನ್‌, 5 ಎಲೆಕ್ಟ್ರಿಷಿಯನ್​ (ಮೆಕ್ಯಾನಿಕ್), 187 ಫಿಟ್ಟರ್, 4 ಮೆಷಿನಿಸ್ಟ್​, 42 ಪೈಂಟರ್, 25 ಪ್ಲಂಬರ್, 15 ಮೆಕ್ಯಾನಿಕ್(RAC), 4 SMW, 27 ಸ್ಟೆನೊ(ಇಂಗ್ಲಿಷ್), 19 ಸ್ಟೆನೊ (ಹಿಂದಿ), 12 ಡೀಸೆಲ್ ಮೆಕ್ಯಾನಿಕ್, 4 ಟರ್ನರ್, 4 ವೆಲ್ಡರ್, 80 ವೈರ್​​ಮ್ಯಾನ್​, 4 ಕೆಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್ ಮತ್ತು 2 ಡಿಜಿಟಲ್ ಫೋಟೋಗ್ರಾಫರ್ ಹುದ್ದೆಗಳು ಖಾಲಿ ಇವೆ.


ಇದನ್ನೂ ಓದಿ: Daily GK Quiz: "ರೋಮಿಯೋ ಮತ್ತು ಜೂಲಿಯೆಟ್" ನಾಟಕವನ್ನು ಬರೆದವರು ಯಾರು?


ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಛತ್ತೀಸ್​ಗಢದ ಬಿಲಸ್ಪುರ


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಶಾರ್ಟ್​ಲಿಸ್ಟಿಂಗ್, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 


ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊಳವೆ ಬಾವಿ ಅಪಘಾತ : ರಕ್ಷಣಾ ಕಾರ್ಯಾಚರಣೆ ಆರಂಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.