ಧಾರವಾಡ : 2022ನೇ ಸಾಲಿನಲ್ಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಸೇರಿದಂತೆ ವಿವಿಧ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Samantha: ನಟಿ ಸಮಂತಾ ಫಿಟ್ನೆಸ್‌ ಸಿಕ್ರೇಟ್‌ ಇಲ್ಲಿದೆ ನೋಡಿ.. ನೀವೂ ಒಮ್ಮೆ ಟ್ರೈ ಮಾಡಿ


ಪ್ರಥಮ ಮುದ್ರಣವಾಗಿ 2022ರ ಜನವರಿ 1 ರಿಂದ 2022ರ ಜೂನ್ 30 ರವರೆಗೆ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ 2022ರ ಜುಲೈ 20 ರೊಳಗಾಗಿ ಸಲ್ಲಿಸಬೇಕು. ತದನಂತರ ಯಾವುದೇ ಪುಸ್ತಕಗಳನ್ನು ಆಯ್ಕೆಗೆ ಸ್ವೀಕರಿಸಲಾಗುವುದಿಲ್ಲ.


ಇದನ್ನೂ ಓದಿ: Megha Shetty: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ!


ಅರ್ಜಿದಾರರು ಅರ್ಜಿ ನಮೂನೆಯನ್ನು ಇಲಾಖೆಯ ಅಂತರ್ಜಾಲದಲ್ಲಿ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳಲ್ಲಿ ನಿಗದಿತ ಅರ್ಜಿ ನಮೂನೆ ಪಡೆಯಬಹುದು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2442183 ಸಂಪರ್ಕಿಸಬಹುದು ಎಂದು ಧಾರವಾಡ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಎಂ.ಬಿ.ಕರಿಗಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.