IRCTC Recruitment 2024: ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್(IRCTC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂವಾಗಿದ್ದು, ಉದ್ಯೋಗ ಹುಡುಕುತ್ತಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಬಯಸುವವರಿಗೆ ಇದು ಸುವರ್ಣಾವಕಾಶ.


COMMERCIAL BREAK
SCROLL TO CONTINUE READING

ಯಾವ ಹುದ್ದೆಗಳು ಖಾಲಿ ಇವೆ?: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂ. ಇರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 


ಇದನ್ನೂ ಓದಿ: 'ಧನ್ಯವಾದಗಳು ಚೋಟು' ಎಂದ ಯುವತಿಗೆ ರತನ್ ಟಾಟಾ ಹೇಳಿದ್ದೇನು ಗೊತ್ತೇ? ಅವರ ಉತ್ತರ ನಿಜಕ್ಕೂ ನಿಮ್ಮ ಮನ ಗೆಲ್ಲುವಂತಿದೆ


ಹುದ್ದೆಗಳ ವಿವರ: IRCTC ಹೊರಡಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯೋಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಸದ್ಯ ನೇಮಕಾತಿ ವಯೋಮಿತಿ ಗರಿಷ್ಠ 55 ವರ್ಷ. ಇದೇ ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್‌ಸೈಟ್‌ನಲ್ಲಿ ಉದ್ಯೋಗ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅಷ್ಟೇ ಅಲ್ಲ ಆನ್‌ಲೈನ್ ಮೂಲಕವೂ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  


ವೇತನ ವಿವರ: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 15,600 ರೂ.ನಿಂದ ಗರಿಷ್ಠ 39,100 ರೂ.ವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 70 ಸಾವಿರ ರೂ.ನಿಂದ 2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.


ಇದನ್ನೂ ಓದಿ: ಉದ್ಯಮಿ ರತನ್ ಟಾಟಾಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ..? ಇಲ್ಲಿದೆ ಮಹತ್ವದ ನಿರ್ಧಾರ 


ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರ, ವಿದ್ಯಾರ್ಹತೆ ದಾಖಲೆ ಸೇರಿದಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇ-ಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.