ISRO Recruitment 2023: ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ (IPRC) ವಿವಿಧ ಉದ್ಯೋಗಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹತ್ತನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾದವರಿಗೆ ಸುವರ್ಣಾವಕಾಶವಿದೆ.
ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಟೆಕ್ನಿಷಿಯನ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಸ್ರೋ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಅರ್ಹತಾ ಮಾನದಂಡ ಸೇರಿದಂತೆ ಎಲ್ಲಾ ಪ್ರಮುಖ ಮಾಹಿತಿಗಳು ಇಲ್ಲಿವೆ.
ISRO IPRC ಯ ಅಧಿಕೃತ ವೆಬ್‌ಸೈಟ್‌ನಲ್ಲಿ https://www.iprc.gov.in/iprc/ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ನೇಮಕಾತಿಗಾಗಿ ಫಾರ್ಮ್‌ಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದೆ.
ಇದನ್ನೂ ಓದಿ- ಲೋಕಸಭಾದಿಂದ ಅನರ್ಹಗೊಂಡಿದ್ದ ಈ ಸಂಸದನ ಸದಸ್ಯತ್ವ ಮರುಸ್ಥಾಪನೆ...!
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
27 ಮಾರ್ಚ್ 2023ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು 24 ಏಪ್ರಿಲ್ 2023ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ:
ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಿಕಲ್/ಕಂಪ್ಯೂಟರ್ ಸೈನ್ಸ್/ಸಿವಿಲ್) ವಿಷಯದಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ತಂತ್ರಜ್ಞ ಬಿ: ಐಟಿಐ ಪ್ರಮಾಣಪತ್ರ ಹೊಂದಿರುವ ಯುವಕರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಹೆವಿ ವೆಹಿಕಲ್ ಡ್ರೈವರ್ / ಲೈಟ್ ವೆಹಿಕಲ್ ಡ್ರೈವರ್ : 10 ನೇ ತರಗತಿ ಪಾಸಾದ ಯುವಕರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಡ್ರೈವಿಂಗ್ ಲೈಸೆನ್ಸ್ ಕೂಡ ಹೊಂದಿರಬೇಕು.
ಫೈರ್‌ಮ್ಯಾನ್: 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ- ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕರೋನಾ ಕರಿಛಾಯೆ ! ತುರ್ತು ಸಭೆ ಕರೆದ ಆರೋಗ್ಯ ಇಲಾಖೆ
ವಯಸ್ಸಿನ ಮಿತಿ:
ಫೈರ್‌ಮ್ಯಾನ್ ಹೊರತುಪಡಿಸಿ ಎಲ್ಲಾ ಹುದ್ದೆಗಳಿಗೆ ವಯೋಮಿತಿ 35 ವರ್ಷಗಳು. ವಯಸ್ಸಿನ ಮಿತಿಯನ್ನು ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.