ITBP Recruitment 2023: ಐಟಿಬಿಪಿಯಲ್ಲಿ 458 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ITBP Driver Recruitment 2023: ಈ ಹುದ್ದೆಗಳಿಗೆ ನೇಮಕಾತಿಯು 4 ಹಂತಗಳಲ್ಲಿ ನಡೆಯಲಿದೆ. ಮೊದಲು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಯೋಗಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ.
ನವದೆಹಲಿ: ಇಂಡೋ ಟಿಬೆಟಿಯನ್ ಗಡಿ ಭದ್ರತಾ ಪಡೆಯಲ್ಲಿ (Indo Tibetan Border Police Force -ITBP) ಖಾಲಿ ಇರುವ 458 ಕಾನ್ಸ್ಟೆಬಲ್ ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಜೂನ್ 27ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 26ಕ್ಕೆ ಅರ್ಜಿ ಅಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಆಗಿರುವ https://recruitment.itbpolice.nic.in/ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Railway Recruitment: 3624 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಆದವರು ಇಂದೇ ಅರ್ಜಿ ಸಲ್ಲಿಸಿ
ಕನಿಷ್ಠ 10ನೇ ತರಗತಿ ಪಾಸ್ ಆಗಿರುವ ಮತ್ತು ಕಡ್ಡಾಯವಾಗಿ ಹೆವಿ ವೆಹಿಕಲ್ ಡ್ರೈವಿಂಗ್ ಲೈಸನ್ಸ್ ಹೊಂದಿರುವ 21 ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ನೇಮಕಾತಿಯು 4 ಹಂತಗಳಲ್ಲಿ ನಡೆಯಲಿದೆ. ಮೊದಲು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಯೋಗಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: AAP ಅನ್ನು ಬಿಜೆಪಿಯ ಬಿ ಟೀಮ್ ಎಂದು ಕರೆದ ವರಿಷ್ಠ ಕಾಂಗ್ರೆಸ್ ಮುಖಂಡ
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.