EPFO JOB ALERT: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಹುದ್ದೆಯ ವಿವರ: ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 132, OBC ಅಭ್ಯರ್ಥಿಗಳಿಗೆ 87, EWS ​32, SC 24 ಮತ್ತು STಗೆ 48 ಹುದ್ದೆಗಳನ್ನು ಮೀಸಲು ಇರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾಷೆಯಲ್ಲಿ ಸ್ಟೆನೋಗ್ರಾಫರ್​ ಆಗಿರಬೇಕು.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ 2 ರೂಪಾಯಿ ಇಳಿಸಲು ಕೇಂದ್ರ ನಿರ್ಧಾರ


ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ವೇತನ: ಮಾಸಿಕ 44,900 ರೂ. ವೇತನ ನಿಗದಿಪಡಿಸಲಾಗಿದೆ  


ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. SC/ST, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. 


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುವುದು. ಈ ಹುದ್ದೆಗೆ ಮಾರ್ಚ್​ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 27 ಕೊನೆಯ ದಿನವಾಗಿರುತ್ತದೆ. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಇದನ್ನೂ ಓದಿ: Mamata Banerjee: ಬಿದ್ದು ಹಣೆಗೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.