ನವದೆಹಲಿ: ಭಾರತೀಯ ಸೇನೆಯು 'ಅಗ್ನಿವೀರ್' ನೇಮಕಾತಿಯಡಿ 25 ಸಾವಿರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ ಮಾರ್ಚ್ 22 ಕೊನೆಯ ದಿನಾಂಕವಾಗಿದೆ.


COMMERCIAL BREAK
SCROLL TO CONTINUE READING

ನೇಮಕಾತಿ ವಿವರ: ಭಾರತೀಯ ಸೇನೆಯಲ್ಲಿ ಖಾಲಿ ಇರುವ 25 ಸಾವಿರ ʼಅಗ್ನಿವೀರ್ʼ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಕೇವಲ ಆನ್‌ಲೈನ್‌ ಮೂಲಕವಷ್ಟೇ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಸೇವೆಗೆ ನೀಯೋಜಿಸಲಾಗುತ್ತದೆ.


ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಬೀಳಲಿದೆ: ಮಾಜಿ ಸಚಿವ ರೇಣುಕಾಚಾರ್ಯ


ಫೆಬ್ರವರಿ 8ರಿಂದ ʼಅಗ್ನಿವೀರ್ʼ ನೇಮಕಾತಿ ರ್ಯಾಲಿಗಾಗಿ ನೋಂದಣಿ ಪ್ರಾರಂಭಿಸಿದ್ದು, ಮಾ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್‌ joinindianarmy.nic.inಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 


ಅರ್ಜಿ ಸಲ್ಲಿಸುವುದು ಹೇಗೆ?


  • ಅಭ್ಯರ್ಥಿಗಳು joinindianarmy.nic.in ʼಅಗ್ನಿವೀರ್ʼ ನೇಮಕಾತಿಗೆ ಮೀಸಲಾಗಿರುವ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

  • ʼಅಗ್ನಿವೀರ್ ನೇಮಕಾತಿ 2024ʼ ವಿಭಾಗವನ್ನು ವೀಕ್ಷಿಸಿ ಮತ್ತು ಅರ್ಜಿ ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ.

  • ಖಾತೆಯನ್ನು ರಚಿಸಲು ಅಗತ್ಯ ವಿವರಗಳನ್ನು ಒದಗಿಸುವ ಮೂಲಕ ಹೆಸರು ನೋಂದಾಯಿಸಿ.

  • ಹೊಸದಾಗಿ ರಚಿಸಲಾದ ರುಜುವಾತುಗಳನ್ನು ಬಳಸಿಕೊಂಡು ಲಾಗಿನ್ ಮಾಡಿ.

  • ನಿಖರವಾದ ಮಾಹಿತಿಯೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ.

  • ಶೈಕ್ಷಣಿಕ ಪ್ರಮಾಣಪತ್ರಗಳು, ಗುರುತು ಮತ್ತು ಛಾಯಾಚಿತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

  • ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಅರ್ಜಿ ಸಲ್ಲಿಸಿ.

  • ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿರಿ.


ಇದನ್ನೂ ಓದಿ: "ಕರ್ನಾಟಕದಲ್ಲಿ ಬಾಬರ್‌ ಮತ್ತು ಟಿಪ್ಪು ಸರ್ಕಾರವಿದೆ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.