ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿದ ಬಳಿಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


COMMERCIAL BREAK
SCROLL TO CONTINUE READING

ಹುದ್ದೆಗಳ ವಿವರ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2021-22ನೇ ಸಾಲಿನಲ್ಲಿ ಹೊಸದಾಗಿ ಸೃಜಿಸಲಾದ ಒಟ್ಟು 413 ಅರಣ್ಯ ವೀಕ್ಷಕ ಹುದ್ದೆಗಳ ಪೈಕಿ 310 ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ವೃತ್ತವಾರು ಹುದ್ದೆಗಳ ಮಾಹಿತಿ ತಿಳಿದು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು.


ಇದನ್ನೂ ಓದಿ: ಈ ಬಾರಿ ಸರ್ಕಾರಿ ಉದ್ಯೋಗಿಗಳಿಗೆ ಡಬಲ್ ಧಮಾಕ ! ವೇತನದಲ್ಲಿ ಇಷ್ಟು ಹೆಚ್ಚಳ ಫಿಕ್ಸ್


ಅರಣ್ಯ ವೃತ್ತವಾರು ಹುದ್ದೆಗಳ ವಿವರ


ಬೆಂಗಳೂರು ವೃತ್ತ : 33


ಬೆಳಗಾವಿ : 20


ಬಳ್ಳಾರಿ: 20


ಚಾಮರಾಜನಗರ: 32


ಚಿಕ್ಕಮಗಳೂರು: 25


ಧಾರವಾಡ: 07


ಹಾಸನ: 20


ಕೆನರಾ: 32


ಕೊಡಗು: 16


ಕಲಬುರಗಿ: 23


ಮಂಗಳೂರು: 20


ಮೈಸೂರು: 32


ಶಿವಮೊಗ್ಗ: 30


ಒಟ್ಟು : 310


ವಿದ್ಯಾರ್ಹತೆ: ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು: ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ: 27-09-2023 & ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-10-2023


ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲುಸು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರು 27 ವರ್ಷ, ಒಬಿಸಿ ಅಭ್ಯರ್ಥಿಗಳು 30 ವರ್ಷ, SC/ST ಅಭ್ಯರ್ಥಿಗಳು 32 ವರ್ಷ ಮೀರದಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.


ಅರ್ಜಿ ಶುಲ್ಕ: ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ 125 ರೂ. ಅರ್ಜಿ ಶುಲ್ಕವಿದ್ದರೆ, SC/ST/ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ರೂ. ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://aranya.gov.in/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.


ಇದನ್ನೂ ಓದಿಈ ಬಾರಿ ಸರ್ಕಾರಿ ಉದ್ಯೋಗಿಗಳಿಗೆ ಡಬಲ್ ಧಮಾಕ ! ವೇತನದಲ್ಲಿ ಇಷ್ಟು ಹೆಚ್ಚಳ ಫಿಕ್ಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.