Job Alert: ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Recruitment 2023: ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.

Written by - Puttaraj K Alur | Last Updated : Dec 13, 2023, 08:31 PM IST
  • ರಾಜ್ಯದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ
  • ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿ/ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ
  • ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿರುವ ಸರ್ಕಾರ
Job Alert: ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ title=
Karnataka Job openings 2023

ಬೆಂಗಳೂರು: ನಿರುದ್ಯೋಗಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿ / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುವುದು.

ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.

ಇದನ್ನೂ ಓದಿ: ಭಾರತದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆ: ಫಿಚ್ ರೇಟಿಂಗ್ ಭವಿಷ್ಯ

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‍ಲಿಸ್ಟ್‌ ಮಾಡಿ ನೇಮಕ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಮಾಡಲಾಗಿತ್ತು. ಆದರೆ ಇನ್ನುಮುಂದೆ ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಗ್ರಾಮ ಲೆಕ್ಕಾಧಿಕಾರಿ / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ ಸಿಕ್ಕಂತಾಗಿದೆ. ಶೀಘ್ರವೇ ಸರ್ಕಾರ ಈ ಹುದ್ದೆಗಳ ಬಗ್ಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಹೀಗಾಗಿ ಆಸಕ್ತ ಅಭ್ಯರ್ಥಿಗಳು ಪರೀಕ್ಷೆಗೆ ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ನಡೆಸಿದರೆ ಯಶಸ್ಸು ಪಡೆಯಬಹುದಾಗಿದೆ.

ಇದನ್ನೂ ಓದಿ: Parliament Attack: ಲೋಕಸಭೆಯಲ್ಲಿ ಭದ್ರತಾ ಲೋಪ, ಬಂಧಿತ ನಾಲ್ವರ ಪೈಕಿ ಇಬ್ಬರಿಗೆ ಮೈಸೂರಿನ ಲಿಂಕ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News