ಬೆಂಗಳೂರು: ನಿರುದ್ಯೋಗಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿ / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುವುದು.


COMMERCIAL BREAK
SCROLL TO CONTINUE READING

ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ: ಭಾರತದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆ: ಫಿಚ್ ರೇಟಿಂಗ್ ಭವಿಷ್ಯ


ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‍ಲಿಸ್ಟ್‌ ಮಾಡಿ ನೇಮಕ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಮಾಡಲಾಗಿತ್ತು. ಆದರೆ ಇನ್ನುಮುಂದೆ ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.


ಗ್ರಾಮ ಲೆಕ್ಕಾಧಿಕಾರಿ / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ ಸಿಕ್ಕಂತಾಗಿದೆ. ಶೀಘ್ರವೇ ಸರ್ಕಾರ ಈ ಹುದ್ದೆಗಳ ಬಗ್ಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಹೀಗಾಗಿ ಆಸಕ್ತ ಅಭ್ಯರ್ಥಿಗಳು ಪರೀಕ್ಷೆಗೆ ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ನಡೆಸಿದರೆ ಯಶಸ್ಸು ಪಡೆಯಬಹುದಾಗಿದೆ.


ಇದನ್ನೂ ಓದಿ: Parliament Attack: ಲೋಕಸಭೆಯಲ್ಲಿ ಭದ್ರತಾ ಲೋಪ, ಬಂಧಿತ ನಾಲ್ವರ ಪೈಕಿ ಇಬ್ಬರಿಗೆ ಮೈಸೂರಿನ ಲಿಂಕ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.