ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪೋಸ್ಟ್‌ಮನ್‌ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಪೋಸ್ಟ್‌ಮನ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.


ಇದನ್ನೂ ಓದಿMonkhood: ಸನ್ಯಾಸಿ ಜೀವನ ನಡೆಸಲು 200 ಕೋಟಿ ರೂ ಮೌಲ್ಯದ ಸಂಪತ್ತು ದಾನ ಮಾಡಿದ ದಂಪತಿಗಳು..!


ಶೈಕ್ಷಣಿಕ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಪಾಸಾಗಿರಬೇಕು.  


ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ SC/STಗೆ 3 ವರ್ಷ ಮತ್ತು OBCಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ಸಂಬಳ: ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 12-14 ಸಾವಿರ ಸಂಬಳ ನೀಡಲಾಗುತ್ತದೆ. ಇದಲ್ಲದೆ ಸರ್ಕಾರದಿಂದ ವಿವಿಧ ಸವಲತ್ತುಗಳು ಸಹ ಸಿಗುತ್ತವೆ.


ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮಹಿಳೆಯರು, SC/ST PWD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.


ಏನು ಕೆಲಸ..?: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪೋಸ್ಟ್ ಆಫೀಸ್‌ನ ದೈನಂದಿನ ಕಾರ್ಯಾಚರಣೆಯಲ್ಲಿ ಕೆಲಸ ಮಾಡಬೇಕಾಗುತ್ತದೆ.


ಇದನ್ನೂ ಓದಿ: ಅಮರನಾಥ ಯಾತ್ರಾರ್ಥಿಗಳಿಗೆ ಶುಭ ಸುದ್ದಿ..! ನೋಂದಣಿ ವಿಧಾನ, ದಿನಾಂಕ, ಹೆಚ್ಚಿನ ಮಾಹಿತಿ ಇಲ್ಲಿದೆ


ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ಕೇವಲ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.