ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ʼಸಿʼ ಹುದ್ದೆಗಳು ಸೇರಿದಂತೆ ಒಟ್ಟು 1,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 PDO ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಏಪ್ರಿಲ್‌ 15ರಿಂದ ಮೇ 15ರವರೆಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: Shocking News: ಭಾರತದಲ್ಲಿ 40 ಲಕ್ಷಕ್ಕೂ ಹೆಚ್ಚು ಜನರಿಗೆ ಅಂಧತ್ವ..!


PDO ಅಲ್ಲದೆ ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿಯಿರುವ 400ಕ್ಕೂ ಹೆಚ್ಚು ಗ್ರೂಪ್‌ ʼಸಿʼ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದೆ. ಈ ಪೈಕಿ ಉಳಿಕೆ ಮೂಲ ವೃಂದದಲ್ಲಿನ ಖಾಲಿಯಿರುವ 313 ಗ್ರೂಪ್‌ ʼಸಿʼ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಏಪ್ರಿಲ್‌ 29ರಿಂದ ಮೇ 28ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ KPSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಪ್ರಮುಖ ದಿನಾಂಕಗಳು


ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 29-04-2024


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024


ಶುಲ್ಕ ಪಾವತಿಗೆ ಕೊನೆಯ ದಿನಾಂಕ: 28-05-2024


ಅಭ್ಯರ್ಥಿಗಳು KPSCಯ ಅಧಿಕೃತ ವೆಬ್‌ಸೈಟ್ ಅಂದರೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಇತರ ಯಾವುದೇ ಮೂಲಗಳಿಂದ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಹಂತ, ಹುದ್ದೆಯ ವಿವರ, ಅರ್ಹತೆ, ವೇತನ, ವಯೋಮಿತಿ ಮುಂತಾದ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಇದನ್ನೂ ಓದಿ: ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.