Indian Army Recruitment 2024: ಭಾರತೀಯ ಸೇನೆಯು ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 90 10+2 ಟೆಕ್ನಿಕಲ್ ಎಂಟ್ರಿ ಸ್ಕೀಂ- 52 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಭಾರತೀಯ ಸೇನೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ​ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Pune : ಏರ್ ಇಂಡಿಯಾ ವಿಮಾನಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಹಾರಾಟ ರದ್ದು


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರದಾದ್ಯಂತ  


ವೇತನ: ಲೆಫ್ಟಿನೆಂಟ್‌ಗೆ ಮಾಸಿಕ ₹56,100-1,77,500, ಕ್ಯಾಪ್ಟನ್‌ಗೆ ₹61,300-1,93,900, ಮೇಜರ್‌ಗೆ ₹69,400-2,07,200, ಲೆಫ್ಟಿನೆಂಟ್ ಕರ್ನಲ್‌ಗೆ ₹1,21,200-2,12,400, ಕರ್ನಲ್‌ಗೆ ₹1,30,600-2,15,900, ಬ್ರಿಗೇಡಿಯರ್‌ಗೆ ₹1,39,600-2,17,600, ಮೇಜರ್ ಜನರಲ್‌ಗೆ ₹1,44,200-2,18,200, ಲೆಫ್ಟಿನೆಂಟ್ ಜನರಲ್ HAG ಸ್ಕೇಲ್ ₹1,82,200-2,24,100, ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್ ₹2,05,400-2,24,400, VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ (NFSG) ₹2,25,000 ಮತ್ತು COAS ₹2,50,000 ವೇತನ ನೀಡಲಾಗುತ್ತದೆ. 


ವಯೋಮಿತಿ: ಕೋರ್ಸ್ ಪ್ರಾರಂಭವಾಗುವ ತಿಂಗಳ ಮೊದಲ ದಿನದಂದು ಅಭ್ಯರ್ಥಿಯು 16½ ವರ್ಷಕ್ಕಿಂತ ಕಡಿಮೆ ಮತ್ತು 19½ ವರ್ಷಕ್ಕಿಂತ ಮೇಲ್ಪಟ್ಟಿರಬಾರದು. ಅಂದರೆ ಅಭ್ಯರ್ಥಿಯು ಜುಲೈ 2, 2005ಕ್ಕಿಂತ ಮೊದಲು ಮತ್ತು ಜುಲೈ 1, 2008ರ ನಂತರ ಜನಿಸಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ: Daily GK Quiz: ಅತಿಹೆಚ್ಚು ಫುಟ್ಬಾಲ್ ವಿಶ್ವಕಪ್ ಗೆದ್ದ ದೇಶ ಯಾವುದು?‌


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.