BBMP Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 11,307 ಪೌರಕಾರ್ಮಿಕ-ಗ್ರೂಪ್​ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್/ಪೋಸ್ಟ್​​ ​ಮೂಲಕ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: ನೇಮಕಾತಿ ಮೂಲಕ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.


ಇದನ್ನೂ ಓದಿ: Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!


ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇರಬೇಕೆಂದು ಬಿಬಿಎಂಪಿ ತಿಳಿಸಿಲ್ಲ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.


ವೇತನ: ಗ್ರೂಪ್​ ʼಡಿʼ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000-28,950 ರೂ. ಸಂಬಳ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಬೆಂಗಳೂರು


ಇದನ್ನೂ ಓದಿ: Loksabha election 2024 : ವಿಶೇಷ ಡೂಡಲ್ ಮೂಲಕ ಮತದಾನದ ಹಬ್ಬ ಸಂಭ್ರಮಿಸಿದ ಗೂಗಲ್


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮಹಾನಗರ ಪಾಲಿಕೆ ಕಚೇರಿಗಳು, ನರಸಿಂಹರಾಜ ಚೌಕ್, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.