Women and Child Development Department Kalaburagi: ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಮತ್ತು ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳು ಆಫ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.


ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!


ಹುದ್ದೆಯ ಮಾಹಿತಿ: ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್​ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​) ಹುದ್ದೆ ಖಾಲಿ ಇವೆ. 


ಶೈಕ್ಷಣಿಕ ಅರ್ಹತೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಕಲಬುರಗಿ


ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ, ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೈಲ್ವೆ ನಿಲ್ದಾಣ, IB ರಸ್ತೆ, ಗುರುಕುಲ ಕಾಲೇಜು ಹತ್ತಿರ, ಧಡೇಡ್ ಹೆರಿಗೆ ಆಸ್ಪತ್ರೆ ಆವರಣ, ಕಲಬುರಗಿ, ಕರ್ನಾಟಕ


ಇದನ್ನೂ ಓದಿ: CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.