CISF Constable Recruitment 2024: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿಯಿರುವ ಒಟ್ಟು 1,130 ಕಾನ್ಸ್‌ಟೇಬಲ್‌ ಅಗ್ನಿಶಾಮಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಆಗಸ್ಟ್ 21ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://cisfrectt.cisf.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  


COMMERCIAL BREAK
SCROLL TO CONTINUE READING

ಒಟ್ಟು 1,130 ಅಗ್ನಿಶಾಮಕ ಕಾನ್ಸ್‌ಟೇಬಲ್‌ ಹುದ್ದೆಗಳಲ್ಲಿ ಸಾಮಾನ್ಯ ವರ್ಗಕ್ಕೆ 466, EWS (ಆರ್ಥಿಕವಾಗಿ ಹಿಂದುಳಿದ ವರ್ಗ) 144, ಪರಿಶಿಷ್ಟ ಜಾತಿಗಳಿಗೆ 153, ಪರಿಶಿಷ್ಟ ಪಂಗಡಕ್ಕೆ 161 ಮತ್ತು OBC (ಇತರ ಹಿಂದುಳಿದ ವರ್ಗಗಳಿಗೆ) 236 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.


ಇದನ್ನೂ ಓದಿ: ಒಂದಲ್ಲ..ಎರಡಲ್ಲ...23 ರೈಲ್ವೆಗಳು ನಿಲ್ಲುತ್ತವೆ ಈ ಸ್ಟೇಶನ್ ನಲ್ಲಿ..! ಅಚ್ಚರಿ ಹಾಗೂ ರೋಚಕ ಕಥನಗಳಿವೆ ಇಲ್ಲಿ..!


ಈ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಪ್ರಕ್ರಿಯೆ ಆಗಸ್ಟ್ 30ರಿಂದ ಪ್ರಾರಂಭವಾಗಲಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30 ಆಗಿರುತ್ತದೆ. ಪರೀಕ್ಷೆಯ ದಿನಾಂಕಗಳು ಮತ್ತು ಪ್ರವೇಶ ಪತ್ರದ ಬಿಡುಗಡೆಯ ವಿವರಗಳನ್ನು ಇನ್ನೂ ಘೋಷಿಸಿಲ್ಲ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. SC/ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಸಾಮಾನ್ಯ, EWS ಮತ್ತು OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 100 ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.


ಇದನ್ನೂ ಓದಿ: Daily GK Quiz: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಯಾರು?


ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ ಅಭ್ಯರ್ಥಿಗಳು ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾನದಂಡಗಳ ಪರೀಕ್ಷೆಯನ್ನು ಒಳಗೊಂಡ ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯ ನಂತರ ಲಿಖಿತ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯವಾರು ಪ್ರತ್ಯೇಕ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.


ಅರ್ಹತಾ ಅಂಕಗಳು: ಕಾಯ್ದಿರಿಸದ, EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇ.35ರಷ್ಟು ಅಂಕಗಳನ್ನು ಗಳಿಸಬೇಕಾಗುತ್ತದೆ. SC/ST ಅಭ್ಯರ್ಥಿಗಳಿಗೆ ಶೇ.35ರಷ್ಟು ಅಂಕ ನೀಡಲಾಗಿದೆ.


ವೇತನ: CISFನ ಕಾನ್ಸ್‌ಟೇಬಲ್‌ ಅಗ್ನಿಶಾಮಕ ಸಿಬ್ಬಂದಿಗೆ ಲೆವೆಲ್ -3 (21,700-69,100 ರೂ.) ಶ್ರೇಣಿಯ ಪ್ರಕಾರ ವೇತನ ನೀಡಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.