ಬೆಂಗಳೂರು : ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ(ಹಂತ-4)ಯನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ನಿವೃತ್ತ ಅಥವಾ ನುರಿತ ಬಿ.ಇ ಅಥವಾ ಡಿಪ್ಲೊಮಾ ಇಂಜಿನಿಯರಗಳನ್ನು ಹಾಗೂ ನಿವೃತ್ತ ಲೆಕ್ಕ ಅಧೀಕ್ಷಕ/ಲೆಕ್ಕಾಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.


ಸಹಾಯಕ ಇಂಜಿನಿಯರ/ಕಿರಿಯ ಇಂಜಿನಿಯರ-2 ಹುದ್ದೆ ಹಾಗೂ ಲೆಕ್ಕ ಅಧೀಕ್ಷಕ/ಲೆಕ್ಕಾಧಿಕಾರಿ-1 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ವೆಬ್ಸೈಟ್:  www.koppal.nic.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ, ಸೇವಾ ಅನುಭವ ಮತ್ತು ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಅಸ್ಪಷ್ಟ ದಾಖಲೆಗಳನ್ನು ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.


ಇದನ್ನೂ ಓದಿ: ಕದ್ದುಮುಚ್ಚಿ ಥಿಯೇಟರ್‌ಗೆ ಬಂದು ‘ಕೆಜಿಎಫ್-2’ ನೋಡಿದ್ರಾ ನಟಿ ಸಾಯಿ ಪಲ್ಲವಿ..?


ನಿವೃತ್ತ ಇಂಜಿನಿಯರ ನೇಮಕ ಬಯಸುವ ಹಾಗೂ ಲೆಕ್ಕ ಅಧೀಕ್ಷಕ/ಲೆಕ್ಕಾಧಿಕಾರಿ ಹುದ್ದೆಗೆ ನಿವೃತ್ತ ಅಭ್ಯರ್ಥಿಗಳು ಸರ್ಕಾರ/ರಾಜ್ಯ ಸರ್ಕಾರಿ ಸ್ವಾಮ್ಯದ ಅಥವಾ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರಬೇಕು. ಈ ಸಂಬಂಧ ನಿವೃತ್ತಿ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.


ನೇಮಕಾತಿ ನಿಯಮಗಳು ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.